ಬಂಟ್ವಾಳ

ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋಅಪರೇಟಿವ್ ಸೊಸೈಟಿ ಉದ್ಘಾಟನೆ

ಬಿ.ಸಿ.ರೋಡಿನ ವಿವೇಕನಗರದ ಶಕ್ತಿ ಕಂಪೌಂಡ್ ನ ಒಂದನೇ ಮಹಡಿಯಲ್ಲಿ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋಅಪರೇಟಿವ್ ಸೊಸೈಟಿ ಗುರುವಾರ ಶುಭಾರಂಭಗೊಂಡಿತು.

ಜಾಹೀರಾತು

ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕ ವೆಂಕಟರಮಣ ಆಸ್ಪಣ್ಣ ದೀಪಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿ ಜನರ ಪ್ರೀತಿ ವಿಶ್ವಾಸಗಳನ್ನು ಗಳಿಸಿ ವ್ಯವಹಾರವನ್ನು ನಡೆಸಿದರೆ ಯಶಸ್ಸು ಸಾಧ್ಯ ಎಂದು ಶುಭ ಹಾರೈಸಿದರು.

ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ಶುಭ ಹಾರೈಸಿದರು. ರಾಜ್ಯ ಸೌಹಾರ್ದ ಸಂಯಕ್ತ ಸಹಕಾರಿ ನಿರ್ದೇಶಕಿ ಭಾರತಿ ಜಿ. ಭಟ್ ಮಾತನಾಡಿ, ಮಹಿಳೆಯೊಬ್ಬರು ಸೊಸೈಟಿ ಅಧ್ಯಕ್ಷೆಯಾಗಿರುವುದು ಸಂತಸದ ವಿಷಯ, ಸಹಕಾರ ಮನೋಭಾವನೆಯಿಂದ ಮುನ್ನಡೆಯಿರಿ ಎಂದು ಸಲಹೆ ನೀಡಿದರು.

https://www.opticworld.net/

ಭದ್ರತಾ ಕೊಠಡಿಯನ್ನು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ಮೈಸೂರು ಪ್ರಾಂತ ಅಧಿಕಾರಿ ಗುರುಪ್ರಸಾದ್ ಬಂಗೇರ ಉದ್ಘಾಟಿಸಿ ಸಹಕಾರ ಕ್ಷೇತ್ರದಲ್ಲಿ ಅನುಭವ ಹೊಂದಿದವರು ಮಾಡಿರುವ ಸಹಕಾರ ಸಂಸ್ಥೆ ಯಶಸ್ವಿಯಾಗಲಿ ಎಂದರು.

ಸಹಕಾರಿ ನಾಮಫಲಕವನ್ನು ಪುತ್ತೂರು ಮಾಜಿ ಪುರಸಭಾಧ್ಯಕ್ಷ ಜೀವಂಧರ ಜೈನ್  ಉದ್ಘಾಟಿಸಿ ಶುಭ ಹಾರೈಸಿದರು. ನಗದು ಕೌಂಟರ್ ಅನ್ನು ಶ್ರೀಮಾತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಕುಲಾಲ್ ಉದ್ಘಾಟಿಸಿದರು,, ಗಣಕಯಂತ್ರವನ್ನು ದ.ಕ.ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಉದ್ಘಾಟಿಸಿದರು. ನಗದು ಪತ್ರವನ್ನು ವಕೀಲರು, ನೋಟರಿ ಅಶ್ವನಿ ಕುಮಾರ್ ರೈ ಬಿಡುಗಡೆಗೊಳಿಸಿ ಮಾತನಾಡಿ, ಬಿ.ಸಿ.ರೋಡ್ ನಲ್ಲಿ ಸಹಕಾರ ಸಂಸ್ಥೆಗೆ ವಿಫುಲ ಅವಕಾಶವಿದ್ದು, ಎಲ್ಲ ವರ್ಗದವರಿಗೂ ಪ್ರಾತಿನಿಧ್ಯ ನೀಡಿ, ಆರ್ಥಿಕ ಶಿಸ್ತು, ಪಾರದರ್ಶಕತೆಯನ್ನು ಪಾಲಿಸಿ ಎಂದು ಕಿವಿಮಾತು ಹೇಳಿದರು.

ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್. ರಕ್ತೇಶ್ವರಿ ದೇವಿ ಸನ್ನಿಧಿ ಸೇವಾ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ್, ಸಜಿಪಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್ ಭಾಗವಹಿಸಿ ಶುಭ ಹಾರೈಸಿದರು. ಸೊಸೈಟಿ ಅಧ್ಯಕ್ಷೆ ರೋಹಿಣಿ ಉದಯ್ ಅಧ್ಯಕ್ಷತೆ ವಹಿಸಿ ಎಲ್ಲರ ಸಹಕಾರ ಕೋರಿದರು. ಸಿಇಒ ಉದಯ ವೆಂಕಟೇಶ ಭಟ್ ಸ್ವಾಗತಿಸಿ, ವಂದಿಸಿದರು. ಉಪಾಧ್ಯಕ್ಷರಾದ ಅವಿನಾಶ್ ಕಾಮತ್, ನಿರ್ದೇಶಕರಾದ ಜಯಲಕ್ಷ್ಮೀ, ಜಯಾನಂದ ಆಚಾರ್ಯ, ಅನಿತಾ ನಾಯಕ್, ಬಿಂದು ಕುಡ್ವ, ಪ್ರಜ್ವಲ್ ಪ್ರಸಾದ್ ಕೆ, ಶ್ರದ್ಧಾ, ದಿವ್ಯಾ, ಪರಮೇಶ್ವರ ಮೊಯ್ಲಿ, ಹರಿಣಾಕ್ಷಿ  ವಿಜೆ ವಿಖ್ಯಾತ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

6 hours ago