ಜಿಲ್ಲಾ ಸುದ್ದಿ

ಸಖತ್ ಸೆಖೆ – ಹೀಟ್ ವೇವ್… ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಬಾರದಾ? ಕಾರ್ಮಿಕರು, ಮಕ್ಕಳು, ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳೇನು? ಕರಾವಳಿ ಜನರಿಗೆ ಜಿಲ್ಲಾಡಳಿತ ನೀಡಿದೆ ಉಪಯುಕ್ತ ಸೂಚನೆ

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕರಾವಳಿ ಜನರಿಗೆ ಬಿಸಿಲಿನ ತಾಪಕ್ಕೆ ಹೇಗೆ ರಕ್ಷಣೆ ಪಡೆಯುವುದು ಎಂಬ ಕುರಿತು ಸೂಚನೆಗಳನ್ನು ಹೊರಡಿಸಿದೆ.

https://www.opticworld.net/

ಜಾಹೀರಾತು
  • ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)ಯನ್ನು ನೀಡಲಾಗಿದೆ. ಜಿಲ್ಲೆಗಳಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನ ಇದು ಮುಂದುವರೆಯುವ ಮುನ್ಸೂಚನೆ ಇರುತ್ತದೆ. ಇದರಿಂದ ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ)ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
  • ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ ಟೋಪಿ, ಬೂಟುಗಳು ಅಥವಾ ಚಪ್ಪಲ್‍ಗಳನ್ನು ಬಳಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ. ಹಳೆಯ ಆಹಾರ ಮತ್ತು ಹೆಚ್ಚಿನ ಪೆÇ್ಟೀನ್ ಹೊಂದಿರುವ ಆಹಾರವನ್ನು ತಪ್ಪಿಸಿ.

  • ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಎಳನೀರು, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ.ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‍ಗಳು ಅಥವಾ ಸನ್‍ಶೇಡ್‍ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ. ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುವಾಗ ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.
  • ಸಾಧ್ಯವಾದಷ್ಟು ವಾಹನಗಳಿಗೆ ಪುಲ್ ಟ್ಯಾಂಕ್ ಇಂಧಧನವನ್ನು ಹಾಕಿಸಬೇಡಿ ಹಾಗೂ ನೆರಳಿನಲ್ಲಿ ನಿಲ್ಲಿಸಿ. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ. ನಿಮಗೆ ಮೂರ್ಚೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು.

  • ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಅವರನ್ನು ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ, ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು. ವ್ಯಕ್ತಿಗೆ , ನಿಂಬೆ ಶರಬತ್ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಬಹುದು. ವ್ಯಕ್ತಿಯನ್ನು ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆ ಕೊಡಿಸಬೇಕಾಗುತ್ತದೆ. ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.
  • ಸಾಧಾರಣ ತಾಪಮಾನ ಮತ್ತು ಶಾಖವು ಸಾಮಾನ್ಯ ಜನರಿಗೆ ಸಹಿಸಿಕೊಳ್ಳಬಲ್ಲದು ಆದರೆ ದುರ್ಬಲ ಜನರಿಗೆ ಮಧ್ಯಮ ಆರೋಗ್ಯ ಕಾಳಜಿ ಉದಾ:- ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವ ಜನರಿಗೆ ಹೆಚ್ಚು ಅಪಾಯವಿದ್ದು ಸೂಕ್ತ ಕಾಳಜಿ ವಹಿಸಬೇಕು.

  • ಬಿಸಿಲಿನಲ್ಲಿ ತಲೆ ಹಾಗೂ ದೇಹವನ್ನು ಸೂರ್ಯನ ಕಿರಣಗಳಿಗೆ ಒಡ್ಡದಿರಿ. ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಿ, ಟೋಪಿ ಅಥವಾ ಕೊಡೆ/ಛತ್ರಿ ಬಳಸಬೇಕು. ಒಂದು ವೇಳೆ ಹೊರಗೆ ಬಿಸಿಲಿನಿಂದ ಮನೆಗೆ ಬಂದ ತಕ್ಷಣ ಕೂಡಲೇ ಅತೀ ತಂಪಾದ ನೀರು ಕುಡಿಯಬಾರದು ಅಥವಾ ಎ.ಸಿ /ಕೂಲರ್‍ಗಳನ್ನು ಕೂಡಲೇ ಬಳಸಬಾರದು.
  • ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿರಿ, ಬಿಸಿಲಿನ ಅವಧಿಯಲ್ಲಿ ಕೊಡೆಗಳನ್ನು ಬಳಸಿ ಸಾಧ್ಯವಾದಷ್ಟು ಹತ್ತಿಯ ಉಡುಪುಗಳನ್ನು ಧರಿಸಿ, ಹತ್ತಿಯ ಟೋಪಿಗಳನ್ನು ಬಳಸಿ, ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಿರಿ, ಸಾಕಷ್ಟು ನೀರು, ಮಜ್ಜಿಗೆ ಕುಡಿಯಿರಿ, ವಾಸವಿರುವ ಕೋಣೆಯನ್ನು ತಂಪಾಗಿರಿಸಿ,ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಿ, ಬಿಸಿಗಾಳಿಗೆ ತುತ್ತಾದ ವ್ಯಕ್ತಿಗೆ ಕೂಡಲೇ ಚಿಕಿತ್ಸೆ ಕೊಡಿಸಿ, ಬಿಸಿಗಾಳಿಗೆ ತುತ್ತಾದವರಿಗೆ ಸಾಕಷ್ಟು ಕುಡಿಯುವ ನೀರು, ಮಜ್ಜಿಗೆ, ದ್ರವ ರೂಪದ ಆಹಾರ ನೀಡಬೇಕು.
  • ನೇರ ಬಿಸಿಲು/ ಬಿಸಿಗಾಳಿಗೆ ಒಡ್ಡಿಕೊಳ್ಳಬೇಡಿ. ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ, ಕಪ್ಪು /ಘಾಡ ಬಣ್ಣದ, ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬೇಡಿ. ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬೇಡಿ. ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬೇಡಿ. ಬಿಸಿ ಚಹ, ಕರಿದ ಪದಾರ್ಥ ಮದ್ಯ ಸೇವಿಸಬೇಡಿ. ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು ತಪ್ಪಿಸಿ. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಲು ತಡಮಾಡಬೇಡಿ. ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದನ್ನು ತಡಮಾಡಬೇಡಿ. ಬಿಸಿಗಾಳಿ ಸಂದರ್ಭಗಳಲ್ಲಿ ಚಹಾ, ಕಾಫಿ ಮತ್ತು ಜೇನು ಸೇವಿಸಬಾರದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.