ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಸಂಜೀವಿನಿ ಸಂತೆ, ಮಹಿಳಾ ದಿನಾಚರಣೆ, ಸ್ವಸಹಾಯ ಸಂಘಗಳಿಗೆ ಸಾಲ ವಿತರಣೆ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ, ಭಾರತಾಂಬೆ ಸಂಜೀವಿನಿ ತಾಲೂಕು ಮಟ್ಟದ ಮಹಿಳಾ ಒಕ್ಕೂಟ ಬಂಟ್ವಾಳ ಸಹಯೋಗದಲ್ಲಿ ಮಂಗಳವಾರ ಬಿ.ಸಿ.ರೋಡಿನ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸ್ವಸಹಾಯ ಸಂಘಗಳಿಗೆ ಬ್ಯಾಂಕ್ ಸಾಲ ವಿತರಣೆ ಕಾರ್ಯಕ್ರಮ ನಡೆಯಿತು.

https://www.opticworld.net/

ಸಂದರ್ಭ ತಾಲೂಕು ಮಟ್ಟದ ಸಂಜೀವಿನಿ ಸಂತೆ, ಪ್ರಧಾನಮಂತ್ರಿ ವನಧನ ವಿಕಾಸ ಕೇಂದ್ರದ ಉತ್ಪನ್ನಗಳ ಅನಾವರಣ ಮತ್ತು ಮಾಹಿತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದು ಮಹಿಳೆಯರು ಸಾಮಾಜಿಕವಾಗಿ ಪ್ರಗತಿಶೀಲರಾಗಿದ್ದು, ಮಹಿಳಾ ಸ್ವಾತಂತ್ರ್ಯದಿಂದ ಇದು ಸಾಧ್ಯವಾಗಿದೆ. ದೇಶದ ಆರ್ಥಿಕ ವ್ಯವಸ್ಥೆಯ ಪ್ರಗತಿಗೆ ಮಹಿಳಾ ಸಮಾನತೆಯೂ ಕಾರಣವಾಗಿದ್ದು, ಆರ್ಥಿಕವಾಗಿ ಮಹಿಳೆ ಸಬಲಳಾಗುವ ಜೊತೆಗೆ ಇಡೀ ಸಮಾಜವನ್ನು ಸಂಸ್ಕಾರಯುತವನ್ನಾಗಿ ಮಾಡಲು ಪುರುಷರು, ಮಹಿಳೆಯರ ಸಮಾನ ಕೊಡುಗೆ ಅಗತ್ಯ. ಮಹಿಳಾ ದೌರ್ಜನ್ಯ ತಡೆಯೂ ಅತಿ ಮುಖ್ಯ. ಸುಸಂಸ್ಕೃತ ಜೀವನ, ಸಮಯ ಪರಿಪಾಲನೆ ಅತೀ ಮುಖ್ಯವಾಗಿದ್ದು, ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಮನೆ, ಮನ, ಮನೆಸ್ಥಿತಿ ಮೂರು ವಿಚಾರಗಳನ್ನು ಮನದಲ್ಲಿಟ್ಟುಕೊಂಡು ಮಹಿಳೆಯರು ಜೀವನ ಸಾಗಿಸಿದರೆ ಯಶಸ್ಸಾಗುತ್ತದೆ ಎಂದರು. ಕಡೇಶಿವಾಲಯದ ಸ್ವಚ್ಛವಾಹಿನಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ರಾಜ್ಯದ ಗಮನ ಸೆಳೆದಿದ್ದನ್ನು ಅವರು ಗಮನ ಸೆಳೆದರು.

ಜಾಹೀರಾತು

ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಇಂದು ಇಪ್ಪತ್ತೇಳು ಗ್ರಾಪಂಗಳಲ್ಲಿ ಸ್ವಚ್ಛವಾಹಿನಿಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದಾರೆ. ಸಂಜೀವಿನಿಯ 1432 ಸ್ವಸಹಾಯ ಸಂಘಗಳು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, 14973 ಸದಸ್ಯರು ಇದರಲ್ಲಿದ್ದಾರೆ. ಇದುವರೆಗೆ 14.64 ಕೋಟಿ ರೂ ಬ್ಯಾಂಕ್ ಸಾಲ ವಿತರಿಸಲಾಗಿದೆ ಎಂದರು.

 ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ ಪೂಜಾರಿ ಅವರು ಸುಮಾರು 30ಕ್ಕೂ ಅಧಿಕ ಮಳಿಗೆಗಳು ಇರುವ ಸಂಜೀವಿನಿ ಸಂತೆ ಉದ್ಘಾಟಿಸಿದರು. ಈ ಸಂದರ್ಭ ಬುಡಾ ಅಧ್ಯಕ್ಷ ಬೇಬಿ ಕುಂದರ್ ಶುಭ ಹಾರೈಸಿದರು. ವೇದಿಕೆಯಲ್ಲಿ ಯೋಜನೆ ನಿರ್ದೇಶಕ ಜಯರಾಮ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನೀತಾ, ಬಂಟ್ವಾಳ ಸಿಡಿಪಿಒ ಮಮ್ತಾಝ್, ಭಾರತಾಂಬೆ ಸಂಜೀವಿನಿ ತಾಲೂಕು ಮಟ್ಟದ ಮಹಿಳಾ ಒಕ್ಕೂಟ ಅಧ್ಯಕ್ಷೆ ಆಕರ್ಷಿಣಿ, ರೀಜನಲ್ ಆಫೀಸರ  ದಿನೇಶ್. ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಗೌಡ, ಸಂಪನ್ಮೂಲ ವ್ಯಕ್ತಿ ಕಸ್ತೂರಿ ಬೊಳುವಾರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನರೇಗಾ 2025-26 ನೇ ಸಾಲಿನ ಕ್ರಿಯಾಯೋಜನೆಗೆ ಅತಿ ಹೆಚ್ಚು ಬೇಡಿಕೆಯನ್ನು ಸಂಗ್ರಹಿಸಿ ನೀಡಿದ ಒಕ್ಕೂಟದ ಪಶು ಸಖಿ ಮತ್ತು ಕೃಷಿ ಸಖಿಗಳಲ್ಲಿ ತಲಾ ಮೂವರಿಗೆ ಸ್ಮರಣಿಕೆ ಮತ್ತು ಪ್ರಮಾಣ ಪತ್ರವನ್ನು ನೀಡಲಾಯಿತು. 2024-25ನೆ ಸಾಲಿನಲ್ಲಿ 200ಕ್ಕಿಂತ ಹೆಚ್ಚು ಇಂಗುಗುಂಡಿ ನಿರ್ಮಿಸಿದ ವಿಟ್ಲಮುಡ್ನೂರು ಗ್ರಾಮ ಪಂಚಾಯತ್  ಚಿಗುರು ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಗೌರವ ಸ್ಮರಣಿಕೆಕೆಯನ್ನು ನೀಡಿ ಅಭಿನಂದಿಸಲಾಯಿತು. ಸೌಮ್ಯಾ ಭಂಡಾರಿಬೆಟ್ಟು ಸ್ವಾಗತಿಸಿದರು. ಮಮತಾ ವಂದಿಸಿದರು. ದೀಕ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

12 hours ago