ಬಂಟ್ವಾಳ: ಪರಂಗಿಪೇಟೆ ಎಂಬಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪುದು ಗ್ರಾಮದ ಕುಮ್ಡೆಲು ನಿವಾಸಿ ರವಿ (54) ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾ.13ರಂದು ಫರಂಗಿಪೇಟೆ ಎಂಬಲ್ಲಿ ಸಂಜೆ 6 ಗಂಟೆ ಅಂದಾಜಿಗೆ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು. ಅ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ,ತುರ್ತು ಚಿಕಿತ್ಸೆ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…