ಬಂಟ್ವಾಳ: ಹಲವು ಸರಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಶಿವಪ್ಪ ಪೂಜಾರಿ (71) ಪಾಣೆಮಂಗಳೂರು ಸಮೀಪ ಸಮೀಪ ಮರ್ದೋಳಿಯ ತನ್ನ ನಿವಾಸದಲ್ಲಿ ಶುಕ್ರವಾರ ರಾತ್ರಿ ನಿಧನ ಹೊಂದಿದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಹೊಂದಿದ್ದರು.
ಬಾಳ್ತಿಲ, ಕಲ್ಲಡ್ಕ, ಕೊಡಂಗೆ, ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ಸಲ್ಲಿಸಿದ್ದ ಅವರು ಮಕ್ಕಳಿಗೆ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು. ನೇರ ನಡೆ ನುಡಿಯ ಶಿವಪ್ಪ ಮಾಸ್ಟರ್ ಎಂದೇ ಪ್ರಸಿದ್ಧರಾಗಿದ್ದ ಅವರು ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಖಜಾಂಚಿಯಾಗಿಯೂ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಪಾಣೆಮಂಗಳೂರು ಸಮೀಪ ಮರ್ದೋಳಿಯಲ್ಲಿ ನೆಲೆಸಿದ್ದರು.