PROTEST AT BANTWALA
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಕುರಿತು ಮಾಧ್ಯಮವೊಂದರಲ್ಲಿ ಹೇಳಿದ್ದಾರೆ ಎಂದು ಆರೋಪಿಸಿ, ಬಿಜೆಪಿಯ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬುಧವಾರ ಬಿ.ಸಿ.ರೋಡ್ ಫ್ಲೈಓವರ್ ಕೆಳಭಾಗದಲ್ಲಿ ಪ್ರತಿಭಟನೆ ನಡೆಯಿತು.
PROTEST AT BANTWALA
ಈ ಸಂದರ್ಭ ಮಾತನಾಡಿದ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್, ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಅತ್ಯಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿದ್ದು, ಕಾಂಗ್ರೆಸ್ ಪಕ್ಷವಾಗಿದ್ದು, ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡು ತಿರುಗಾಡುವ ಆ ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರು ಡಿಕೆಶಿವಕುಮಾರ್ ಹೇಳಿಕೆಗೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿ, ದೇಶದ ಮುಂದೆ ಉಪಮುಖ್ಯಮಂತ್ರಿ ಕ್ಷಮೆ ಕೇಳಬೇಕು ಹಾಗೂ ತಮ್ಮ ಹುದ್ದೆ ತ್ಯಜಿಸಬೇಕು ಎಂದರು. ಓಟ್ ಬ್ಯಾಂಕ್ ಗಟ್ಟಿ ಮಾಡುವ ಮಸೂದೆ ತರಲು ರಾಜ್ಯ ಸರಕಾರ ನಿರ್ಧರಿಸಿದ್ದು ಹದಿನೆಂಟು ಮಂದಿ ಶಾಸಕರನ್ನು ಆರು ತಿಂಗಳು ಅಮಾನತು ಮಾಡುವ ಮೂಲಕ ಇತಿಹಾಸ ಕಂಡುಕೇಳರಿಯದ ತಪ್ಪನ್ನು ಮಾಡಿದ್ದಾರೆ ಎಂದು ಆಪಾದಿಸಿದರು.
ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಮಾತನಾಡಿ, ಹನಿಟ್ರ್ಯಾಪ್ ಶಾಸಕರ ಅಮಾನತು ವಿಚಾರಗಳನ್ನು ಪ್ರಸ್ತಾಪಿಸಿ, ಇದರ ಜೊತೆಗೆ ಸಂವಿಧಾನ ಬದಲಾವಣೆ ಕುರಿತು ಮಾತನಾಡಿದ್ದು, ತಾನು ತೋಡಿದ ಖೆಡ್ಡಾಕ್ಕೆ ತಾವೇ ಬೀಳುವಂತಾಗಿದೆ ಎಂದು ಲೇವಡಿ ಮಾಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ನಾಯಕಿ ಸುಲೋಚನಾ ಜಿ.ಕೆ. ಭಟ್ ಮಾತನಾಡಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.’ ಪಕ್ಷ ಮುಖಂಡರಾದ ದಿನೇಶ್ ಅಮ್ಟೂರು, ದೇವಪ್ಪ ಪೂಜಾರಿ, ಶಿವಪ್ರಸಾದ್ ಶೆಟ್ಟಿ ಅನೆಯಾಲಕೋಡಿ, ಸುದರ್ಶನ ಬಜ, ಪ್ರಭಾಕರ ಪ್ರಭು, ರೊನಾಲ್ಡ್ ಡಿಸೋಜ, ಎ. ಗೋವಿಂದ ಪ್ರಭು, ದಿನೇಶ್ ಭಂಡಾರಿ, ಪುರುಷೋತ್ತಮ ಶೆಟ್ಟಿ ವಾಮದಪದವು, ರಾಮದಾಸ್ ಬಂಟ್ವಾಳ, ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಜಯರಾಮ ರೈ, ಕಮಲಾಕ್ಷಿ ಕೆ. ಪೂಜಾರಿ, ಪ್ರಣಾಮ್ ಅಜ್ಜಿಬೆಟ್ಟು, ಹರಿಪ್ರಸಾದ್ ಭಂಡಾರಿಬೆಟ್ಟು, ಡೊಂಬಯ್ಯ ಅರಳ, ಜನಾರ್ದನ ಕುಲಾಲ್, ಸಹಿತ ಪಕ್ಷದ ನಾನಾ ಜವಾಬ್ದಾರಿಯನ್ನು ಹೊಂದಿರುವ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)