ಬಂಟ್ವಾಳ ತಾಲೂಕು ಕಚೇರಿಗೆ ಡಿಸಿ ಭೇಟಿ, ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಜಮೀನು 1-5 ಪ್ರಕರಣಗಳ ತ್ವರಿತ ವಿಲೇವಾರಿಗೆ ಸೂಚನೆ

ಜಾಹೀರಾತು

ಜಮೀನು ದಾಖಲೆಗಳ  1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ  ಸೂಚಿಸಿದ್ದಾರೆ. ಅವರು ಬಂಟ್ವಾಳ ತಾಲೂಕು ಕಚೇರಿಗೆ ಭೇಟಿ ನೀಡಿ  ಪರಿಶೀಲನೆ ನಡೆಸಿ ಈ ಸೂಚನೆ ನೀಡಿದರು.  ಭೂ ಮಂಜೂರಾತಿ ನಂತರ ಸಾರ್ವಜನಿಕರು  1-5  ಮಾಡಲು ಸಲ್ಲಿಸಿರುವ ಸಾಕಷ್ಟು ಅರ್ಜಿಗಳು ಬಾಕಿ ಇದೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಗಳಾಗುತ್ತಿರುವ ಬಗ್ಗೆ ಮಾಹಿತಿ ಇದೆ. ಆದುದರಿಂದ ಎಲ್ಲಾ ತಾಲೂಕು ಕಚೇರಿಗಳಲ್ಲಿ 1-5 ಪ್ರಕರಣಗಳ ಅರ್ಜಿಗಳನ್ನು ಆದ್ಯತೆಯಲ್ಲಿ ವಿಲೇವಾರಿ ಮಾಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.  ತಾಲೂಕು ಕಚೇರಿಯ  ರೆಕಾರ್ಡ್ ರೂಮ್‍ಗೆ ಭೇಟಿ ನೀಡಿದ ಅವರು  ದಾಖಲೆಗಳ  ಡಿಜಿಟಲೈಝೇಶನ್ ಪ್ರಕ್ರಿಯೆಯನ್ನು ವೀಕ್ಷಿಸಿದರು. ಬಳಿಕ ಸರ್ವೆ ಇಲಾಖೆ ಕಚೇರಿಗೆ ಭೇಟಿ ನೀಡಿದ ಅವರು  ಕಡತಗಳ ಸಂಗ್ರಹವನ್ನು ಪರಿಶೀಲಿಸಿದರು . ಸರ್ವೆ ಅರ್ಜಿ ವಿಲೇವಾರಿಯ ಮಾಹಿತಿ ಪಡೆದ ಅವರು ಯಾವುದೇ ಕಾರಣಕ್ಕೂ ಸರ್ವೆ ಕಾರ್ಯವನ್ನು ವಿಳಂಬಿಸಬಾರದೆಂದು  ಅಧಿಕಾರಿಗಳಿಗೆ ಸೂಚಿಸಿದರು. ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಅವರು ದಾಖಲೆಗಳ ಡಿಜಿಟಲೈಝೇಶನ್ ಪ್ರಕ್ರಿಯೆ, 1-5 ಪ್ರಕರಣಗಳ ವಿಲೇವಾರಿ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಿದರು.  ಈ ಸಂದರ್ಭ ಭೂ ದಾಖಲೆಗಳ ಉಪನಿರ್ದೇಶಕಿ ಪ್ರಸಾದಿನಿ, ಸಹಾಯಕ ನಿರ್ದೇಶಕ ನಿಸಾರ್ ಅಹಮದ್, ಉಪತಹಶಿಲ್ದಾರ್ ನರೇಂದ್ರನಾಥ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕು ಕಚೇರಿಗೆ ಡಿಸಿ ಭೇಟಿ, ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಜಮೀನು 1-5 ಪ್ರಕರಣಗಳ ತ್ವರಿತ ವಿಲೇವಾರಿಗೆ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*