ನೇತ್ರಾವತಿ ಒಡಲಿಗೆ ಕೊಳಚೆ ನೀರು: ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಂದ ಸ್ಯಾಂಪಲ್ ಸಂಗ್ರಹ

ಜಾಹೀರಾತು

ಬಂಟ್ವಾಳ ಪುರಸಭಾ ವ್ಯಾಪ್ತಿಯ ವಿವಿದೆಡೆಯಲ್ಲಿ ಮನೆ, ಹೊಟೇಲ್ ,ಮಾಂಸದಂಗಡಿಯ ಕೊಳಚೆ ನೀರು,ತ್ಯಾಜ್ಯ ವಸ್ತುಗಳು  ನೇರವಾಗಿ ಜಿಲ್ಲೆಯ ಜೀವನದಿ ಹರಿಯುವ ನೇತ್ರಾವತಿ ನದಿಯ ಒಡಲು ಸೇರುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ಬೈಕಂಪಾಡಿಯಲ್ಲಿರುವ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪಪರಿಸರಾಧಿಕಾರಿ ನೇತೃತ್ವದ ತಂಡ  ನೇತ್ರಾವತಿ ನದಿತೀರದ ವಿವಿದೆಡೆಗೆ ಭೇಟಿ ನೀಡಿ ಪರಿಶೀಲಿಸಿ ನೀರಿನ ಬಳಕೆಗೆ ಯೋಗ್ಯವಾಗಿದೆಯೇ ಎಂಬ ನಿಟ್ಟಿನಲ್ಲಿ ನೀರಿನ ಸ್ಯಾಂಪಲ್ ಸಂಗ್ರಹಿಸಿದ್ದಾರೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪಪರಿಸರಾಧಿಕಾರಿ ಡಾ.ಮಂಜು ಆರ್.,ಸಹಾಯಕ ಸುನೀಲ್ ಕುಮಾರ್ ಹಾಗೂ ಪುರಸಭೆಯ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಅವರು ಬಂಟ್ವಾಳ, ಪಾಣೆಮಂಗಳೂರು ಮತ್ತು ಬಿ.ಸಿ.ರೋಡಿನ ಪ್ರಮುಖ ಸ್ಥಳಗಳಲ್ಲಿ‌ಮಲೀನ ನೀರು ಮತ್ತು ‌ತ್ಯಾಜ್ಯ ವಸ್ತುಗಳು ನೇತ್ರಾವತಿ ನದಿಗೆ ಸೇರುವ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.ಪುರಸಭಾ ವ್ಯಾಪ್ತಿಯ ಸುಮಾರು 20 ಸ್ಥಳಗಳಲ್ಲಿ ಮಲೀನ ನೀರು ನೇರವಾಗಿ ನೇತ್ರಾವತಿ ನದಿ ನೀರಿಗೆ ಸೇರುತ್ತಿದ್ದು, ಉಪಪರಿಸರಾಧಿಕಾರಿಯವರ ತಂಡ  ಸುಮಾರು 6 ಕಡೆಗಳಿಗೆ ಭೇಟಿ ನೀಡಿ ನೀರಿನ ಸ್ಯಾಂಪಲ್ ಸಂಗ್ರಹಿಸಿ ಮಹಜರು ಕೂಡ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನೇತ್ರಾವತಿ ಒಡಲಿಗೆ ಕೊಳಚೆ ನೀರು: ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಂದ ಸ್ಯಾಂಪಲ್ ಸಂಗ್ರಹ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*