ಉತ್ತರಾಖಾಂಡ್ ಹರಿದ್ವಾರ್, ಮಾಯಾಪುರಿ ಪಂಚಾಯಿತಿ ಆಖಾಡ ಶ್ರೀ ನಿರಂಜಿನಿ ನಾಗಾಸಾಧು ತಪೋನಿಧಿ ಬಾಬಾ ವಿಠಲ್ ಗಿರೀಜಿ ಮಹಾರಾಜ್ ಅವರು ಭಾನುವಾರ ಬಿ.ಸಿ.ರೋಡಿಗೆ ಆಗಮಿಸಿದರ. ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ದೇವರ ದರ್ಶನ ಪಡೆದ ಸಂದರ್ಭ, ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಸೇವಾ ಸಮಿತಿ ಅಧ್ಯಕ್ಷ ಬಿ. ವಿಶ್ವನಾಥ್, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸಂಜೀವ ಪೂಜಾರಿ ಗುರುಕೃಪ, ಸೇವಾ ಸಮಿತಿ ಕೋಶಾಧಿಕಾರಿ ಬಿ.ಮೋಹನ್, ಉತ್ಸವ ಸಮಿತಿ ಪದಾಧಿಕಾರಿಗಳಾದ ನ್ಯಾಯವಾದಿ ರಾಜಾರಾಮ ನಾಯಕ್, ಪುಷ್ಪರಾಜ್ ಶೆಟ್ಟಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪ್ರಣಾಮ್ ಅಜ್ಜಿಬೆಟ್ಟು, ಜಯ ಮತ್ತಿತರರು ಉಪಸ್ಥಿತರಿದ್ದರು.