ರಾಷ್ಟ್ರ ನಿರ್ಮಾಣಕ್ಕಾಗಿ ಹಿರಿಯರು ಸಾಕಷ್ಟು ಯೋಚಿಸಿ, ಅಧ್ಯಯನ ನಡೆಸಿ ಯೋಜನೆ ರೂಪಿಸಿ ಚುನಾವಣಾ ಆಯೋಗವನ್ನು ರಚಿಸಲಾಗಿದೆ. ಮೂಲಭೂತ ಹಕ್ಕುಗಳು, ಕರ್ತವ್ಯಗಳು, ವಿಧಿ ನಿರ್ದೇಶನ ತತ್ವಗಳು ಕಾನೂನಿನ ಅಡಿಪಾಯ ಆಗಿರುತ್ತವೆ. ಇದರ ಅನ್ವಯ ಒಂದು ಸರ್ಕಾರ ಕಾರ್ಯನಿರ್ವಹಿಸುತ್ತದೆ. ಇಂತಹ ಸರ್ಕಾರವನ್ನು ಚುನಾಯಿಸುವ ಅಧಿಕಾರ ಅದು ದೇಶದ ಜನರಿಗೆ ಮಾತ್ರವಿರುತ್ತದೆ ಎಂದು ಬಂಟ್ವಾಳ ತಾಲೂಕು ತಹಸೀಲ್ದಾರ್ ಅರ್ಚನಾ ಭಟ್ ಹೇಳಿದರು.
ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ-2025ರ ಪ್ರಯುಕ್ತ ಪ್ರೌಢಶಾಲೆ, ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಮತ್ತು ಚುನಾವಣಾ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮತ ಹಾಕುವುದರಿಂದ ನಮಗೇನು ಲಾಭ ಎಂಬ ಯೋಚನೆಯನ್ನು ಬಿಟ್ಟು ದೇಶದ ಒಳಿತಿಗಾಗಿ ಮತ ಹಾಕಬೇಕು ಎಂದು ತಿಳಿಸಿದರು.
ಬಂಟ್ವಾಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಚಿನ್ ಕುಮಾರ್ ಮಾತನಾಡಿ, ಚುನಾವಣೆಗಳಲ್ಲಿ ಮತ ಚಲಾಯಿಸುವುದು ಹಕ್ಕು ಮಾತ್ರವಲ್ಲ. ಅದು ದೇಶ ಕಟ್ಟುವ ನಿಟ್ಟಿನಲ್ಲಿ ಕರ್ತವ್ಯ ಆಗಿದೆ. 18 ವರ್ಷ ತುಂಬಿದ ಎಲ್ಲರೂ ವೋಟಿನ ಮಹತ್ವ ಅರಿತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸಬೇಕು ಎಂದರು. ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಕಾಶ್ ಪಿ., ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಅಬ್ದುಲ್ ರಝಾಕ್, ತಾಪಂ ವಿಷಯ ನಿರ್ವಾಹಕರು, ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.
Be the first to comment on "ರಾಷ್ಟ್ರೀಯ ಮತದಾರರ ದಿನಾಚರಣೆ, ಬಹುಮಾನ ವಿತರಣೆ"