ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ 5.30ಕ್ಕೆ ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ನೃತ್ಯಗುರು ವಿದುಷಿ ರೋಹಿಣಿ ಉದಯ್ ಅವರ ಶಿಷ್ಯೆಯರಿಂದ ನೃತ್ಯರಂಜಿನಿ ಎಂಬ ಕಾರ್ಯಕ್ರಮ ನಡೆಯಲಿದೆ. ಏಪ್ರಿಲ್ 4ರಂದು ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಏ.9ರವರೆಗೆ ನಡೆಯಲಿದ್ದು, ಇಂದು ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.