ಬಂಟ್ವಾಳ

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಜಾಹೀರಾತು

ಬಂಟ್ವಾಳ ತಾಲೂಕು ಆಡಳಿತದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಮಹಾವೀರ ಜಯಂತಿ ಆಚರಣೆ ನಡೆಯಿತು.

ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಇತಿಹಾಸದಲ್ಲಿ ಕಾಲಕಾಲಕ್ಕೆ ಮಹಾಪುರುಷರು ಒದಗಿಬಂದಿದ್ದು, ಸಮ್ಯಕ್ ದರ್ಶನ ಬೋಧನೆ ಮೂಲಕ ಸಾಧಕರಿಗೆ ಮಾರ್ಗದರ್ಶಿಯಾಗಿ ವರ್ಧಮಾನ ಮಹಾವೀರ ಮೂಡಿಬಂದಿದ್ದಾರೆ. ನಮ್ಮ ಜೀವನದಲ್ಲಿ ಮಹಾವೀರನ ತತ್ವಾದರ್ಶ ಪಾಲನೆಯಾಗಬೇಕು ಜೈನ ಧರ್ಮದ ಕೊಡುಗೆಗಳನ್ನು ಜನರು ಗುರುತಿಸಬೇಕು ಎಂಬ ದೃಷ್ಟಿಯಿಂದ ಮಹಾವೀರ ಜಯಂತಿ ಆಚರಣೆ ಮಾಡಲಾಗುತ್ತಿದೆ ಎಂದರು.

ನ್ಯಾಯವಾದಿ ಶಿವಪ್ರಸಾದ್ ಮಾತನಾಡಿ ಮಹಾವೀರರು ಪ್ರತಿಯೊಂದು ಜೀವಿಗೂ ಬದುಕಲು ಹಾಗೂ ತನ್ನನ್ನು ಉದ್ಧರಿಸುವ ಅವಕಾಶ ಇದೆ ಎಂದರು. ಅಹಿಂಸೆ ಎಂಬ ವ್ಯಾಖ್ಯಾನವನ್ನು ಸರಿಯಾಗಿ ಅರ್ಥೈಸಿಕೊಳ್ಳುವುದು ಅಗತ್ಯ. ಮನುಕುಲಕ್ಕೆ ಕೊಟ್ಟ ಕೊಡುಗೆಗಳನ್ನು ಅರಿತುಕೊಳ್ಳಬೇಕು ಎಂದರು.

ಜೈನ್ ಮಿಲನ್ ವಿಭಾಗ ಉಪಾಧ್ಯಕ್ಷ ಸುದರ್ಶನ ಜೈನ್ ಮಾತನಾಡಿ, ಸತ್ಯ, ಶಾಂತಿ, ತ್ಯಾಗ, ಅಹಿಂಸೆಯಂಥ ತತ್ವಗಳನ್ನು ಒದಗಿಸಿ ಬದುಕನ್ನು ಅರ್ಥಮಾಡಿಕೊಳ್ಳುವುದು ಅಗತ್ಯ. ಮಹಾತ್ಮಾ ಗಾಂಧೀಜಿಯವರೂ ಸತ್ಯ ಅಹಿಂಸೆ ತತ್ವದಡಿ ಸ್ವಾತಂತ್ರ್ಯ ಹೋರಾಟ ಮಾಡಿದವರು ಎಂದರು.

ಬಂಟ್ವಾಳ ಜೈನ್ ಮಿಲನ್ ಅಧ್ಯಕ್ಷ ಮಧ್ವರಾಜ್ ಜೈನ್, ಹಿರಿಯರಾದ ಜಿನರಾಜ ಆರಿಗ, ತಾಲೂಕು ಕಚೇರಿ ಉಪತಹಸೀಲ್ದಾರ್ ಗಳಾದ ರಾಜೇಶ್ ನಾಯ್ಕ್, ನರೇಂದ್ರನಾಥ ಮಿತ್ತೂರು,  ದಿವಾಕರ ಮುಗುಳ್ಯ, ಕಂದಾಯ ನಿರೀಕ್ಷಕ ರವಿ.ಎಂ.ಎನ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಷುಕುಮಾರ್ . ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು  ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು. ಜನಾರ್ದನ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts