ಮನರಂಜನೆ

ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ ‘ಮುದ್ದು ಸೊಸೆ’

ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ’ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ

 ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಇದೀಗ, ಮತ್ತೊಂದು ಹೃದಯಸ್ಪರ್ಶಿ ಕತೆ ‘ಮುದ್ದು ಸೊಸೆ’ಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ತ್ರಿವಿಕ್ರಮ್ ನಾಯಕರಾಗಿ ಪ್ರತಿಮಾ ಠಾಕುರ್ ನಾಯಕಿಯಾಗಿರುವ, ಮುನಿ ಮತ್ತು ಹರಿಣಿ ಶ್ರೀಕಾಂತ್ ತಾರಾಗಣದ ಈ ಬಹುನಿರೀಕ್ಷಿತ ಧಾರಾವಾಹಿ ಏಪ್ರಿಲ್ 14ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 7:30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ. ವೈದ್ಯೆ ಆಗಬೇಕೆಂಬ ಕನಸನ್ನು ಕಾಣುತ್ತಿರುವ ಪ್ರತಿಭಾವಂತ ವಿದಾರ್ಥಿನಿ ವಿದ್ಯಾ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆಯನ್ನು ಹೇಳುತ್ತದೆ ‘ಮುದ್ದು ಸೊಸೆ’. ಮನಸ್ತುಂಬಾ ಓದು ತುಂಬಿರುವ, ಮನಸೊಪ್ಪದ ಮದುವೆಯಾಗಿರುವ ‘ಮುದ್ದು ಸೊಸೆ’ ಮನೆಮಂದಿಯೆಲ್ಲ ಸೇರಿ ನೋಡಲೇಬೇಕಾದ ಧಾರಾವಾಹಿ. ಪ್ರೀತಿ, ಸಂಬಂಧಗಳ, ಆತ್ಮವಿಶ್ವಾಸ -ಪ್ರಬಲ ಸಂಕಲ್ಪ ಹೊಂದಿರುವ ನಾಯಕಿಯ ಸುತ್ತ ಹೆಣೆದಿರುವ ಕಥಾ ಹಂದರದಿಂದ ‘ ‘ಮುದ್ದು ಸೊಸೆ’ ಪ್ರೇಕ್ಷಕರ ಹೃದಯ ಗೆಲ್ಲಲಿದೆ. ‘ಎಸ್ಟ್ರೆಲ್ಲಾ ಕಥೆಗಳನ್ನು ‘ ನಿರ್ಮಿಸುತ್ತಿರುವ ‘ಮುದ್ದು ಸೊಸೆ’ ಧಾರಾವಾಹಿಯು ಬೊಗಸೆಗಣ್ಣಿನ ಬಯಕೆಯ ವಿದ್ಯಾಳ ಕತೆಯನ್ನು ಹೇಳುತ್ತದೆ ಪ್ರಕಟಣೆ ತಿಳಿಸಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ