ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಅಂಬೇಡ್ಕರ್ ಜಯಂತಿ ಆಚರಣೆ ನಡೆಯಿತು.
https://www.opticworld.net/
ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಅಂಬೇಡ್ಕರ್ ಅವರ ಮಟ್ಟಕ್ಕೆ ಬೆಳೆದು ನಿಲ್ಲಲ್ಲು ಎಲ್ಲರೂ ಮುಂದಾಗಬೇಕು. ಜನರಿಗೆ ತಲುಪುವ ಕಾರ್ಯಕ್ರಮ ನಡೆಯಿತು. ಅಂಬೇಡ್ಕರ್ ಭವನ ಸದ್ಬಳಕೆ ಆಗುವಂತೆ ಅನುವು ಮಾಡಲು ಶಾಸಕರ ನಿಧಿಯಿಂದ ಅನುದಾನ ನೀಡುವುದಾಗಿ ತಿಳಿಸಿದರು.
ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಮಾತನಾಡಿ, ಶುಭ ಹಾರೈಸಿದರು, ಬುಡಾ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅದ್ಯಕ್ಷೆ ಜಯಂತಿ ವಿ.ಪೂಜಾರಿ, ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್, ***ತಾಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್, ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಪ.ಪಂ, ಪ.ಜಾ (ದೌರ್ಜನ್ಯ ತಡೆ) ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಜಿಲ್ಲಾ ಸದಸ್ಯ ಮೋಹನ್‌ಚಂಡ್ತಿಮಾರ್ ಉಪಸ್ಥಿತರಿದ್ದರು.
ಕೇಪು ಕಲ್ಲಂಗಳ ಸರಕಾರಿ ಶಾಲೆಯ ವಿದ್ಯಾರ್ಥಿನಿ ಗುಣಶ್ರೀ ಅವರು ಅಂಬೇಡ್ಕರ್ ದಿನಾಚರಣೆ ಕುರಿತು ಸಂದೇಶ ನೀಡಿದರು. ನಾವು ಜಾತಿ ಸೋಂಕಿನಿಂದ ಮುಕ್ತರಾದಾಗ ಮಾತ್ರ ದೇಶ ಕಟ್ಟಲು ಸಾಧ್ಯ. ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಕುರಿತು ಅಂಬೇಡ್ಕರ್ ಪ್ರತಿಪಾದಿಸಿದ್ದರು ಎಂದವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನೀತಾ ಕುಮಾರಿ ಸ್ವಾಗತಿಸಿದರು. ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಲಕ್ಷ್ಮಣ್ ವಂದಿಸಿದರು. ಪ್ರದೀಪ್ ಕಾರ್ಯಕ್ರಮ ನಿರ್ವಹಿಸಿದರು ಇದಕ್ಕೂ ಮುನ್ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಅಂಬೇಡ್ಕರ್ ಭವನದ ವರೆಗೆ ಮೆರವಣಿಗೆ ನಡೆಯಿತು,. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ನಾಗರಿಕ ಹಿತರಕ್ಷಣಾ ಯುವವೇದಿಕೆ ಅಧ್ಯಕ್ಷ ಸತೀಶ್ ಅರಳ ಉಪಸ್ಥಿತರಿದ್ದರು.