ಬಂಟ್ವಾಳ ಪುರಸಭಾ ಸಭಾಂಗಣದಲ್ಲಿ 134ನೇ ವರ್ಷದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪುರಸಭಾಧ್ಯಕ್ಷ ವಾಸು ಪೂಜಾರಿ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು ಮುಖ್ಯಾಧಿಕಾರಿ ರೇಖಾ ಜೆ ಶೆಟ್ಟಿ, ಸದಸ್ಯರಾದ ಪುರುಷೋತ್ತಮ ಎಸ್.ಬಂಗೇರಾ, ನಾಮ ನಿರ್ದೇಶನ ಸದಸ್ಯರಾದ ಜಗದೀಶ್‌ಕುಂದರ್, ಪ.ಪಂ, ಪ.ಜಾ (ದೌರ್ಜನ್ಯ ತಡೆ) ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಜಿಲ್ಲಾ ಸದಸ್ಯ ಮೋಹನ್‌ಚಂಡ್ತಿಮಾರ್, ಪುರಸಭಾ ಸಿಬ್ಬಂದಿ ವರ್ಗ ಹಾಗೂ ಪೌರಕಾರ್ಮಿಕರು ಹಾಜರಿದ್ದರು.