ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ನಡೆಯಿತು.
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್ ಸಿಂಗೇರಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಗೋಪಾಲ್ ಕೃಷ್ಣ ಭಟ್ ದಿವಾಣ, ಹಿರಿಯ ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿ ಚಿನ್ನಾ ಮೈರ, ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟ್ ಆಗ್ನೇಸ್ ಮಂಡೋನ್ಸಾ,ಶಿಕ್ಷಕಿಯರಾದ ಶಕುಂತಳಾ, ಮುರ್ಷಿದ ಬಾನು,ಅನುಷಾ,ಸಂಪ್ರಿಯ, ಭವ್ಯ, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ವಂದಿಸಿದರು.
Be the first to comment on "ಮಜಿ ಪ್ರಾಥಮಿಕ ಶಾಲೆಯಲ್ಲಿ .ಅಂಬೇಡ್ಕರ್ ಜನ್ಮ ದಿನಾಚರಣೆ"