ಕಲ್ಲಡ್ಕ

ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 15ನೇ ಕಲ್ಲಡ್ಕ ಶಾಖೆ 26ರಂದು ಉದ್ಘಾಟನೆ: ಸವಣೂರು ಸೀತಾರಾಮ ರೈ

 ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ೧೫ನೇ ಕಲ್ಲಡ್ಕ ಶಾಖೆಯ ಉದ್ಘಾಟನಾ ಸಮಾರಂಭ ಕಲ್ಲಡ್ಕದ ಪ್ರೀತಿ ಟವರ್ಸ್ ನ ಪ್ರಥಮ ಮಹಡಿಯಲ್ಲಿ ಏಪ್ರಿಲ್ 26ರಂದು ಬೆಳಗ್ಗೆ ೧೦.೩೦ಕ್ಕೆ ನಡೆಯಲಿದೆ ಎಂದು ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಬಿ.ರಮಾನಾಥ ರೈ ಭದ್ರತಾ ಕೊಠಡಿಯನ್ನು ಉದ್ಘಾಟಿಸುವರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಂಪ್ಯೂಟರ್ ಉದ್ಘಾಟಿಸುವರು. ನಾರ್ಶದ ಸಿಂಗಾರಿ ಬೀಡಿ ಮಾಲೀಕ ಎನ್.ಸುಲೈಮಾನ್ ಪ್ರಥಮ ಠೇವಣಿಪತ್ರ ಬಿಡುಗಡೆ ಮಾಡುವರು. ಉದ್ಯಮಿ ಬಿ.ಮಹಾಬಲ ರೈ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದವರು ಹೇಳಿದರು.

23 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಸಂಸ್ಥೆ ಗ್ರಾಮೀಣ ಜನರಿಗೆ ಸೇವೆ ಸಲ್ಲಿಸುವ ದೃಷ್ಟಿಯಿಂದ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಾಖೆಗಳನ್ನು ತೆರೆದಿದೆ. ದಾಖಲೆಯ ೨ ಕೋಟಿ ೧ ಲಕ್ಷಕ್ಕೂ ಮೇಲಿನ ಲಾಭಾಂಶ ಗಳಿಸಿದ್ದು, ಸಂಘದ ಪ್ರಗತಿ ಗಮನಿಸಿ ಮಂಗಳೂರಿನಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಐದು ಬಾರಿ ಸಾಧನಾ ಪ್ರಶಸ್ತಿ ಪಡೆದುಕೊಂಡಿದೆ. ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮತ್ತು ಸಂಘದ ಸಿಬ್ಬಂದಿ ವರ್ಗದವರ ಕಾರ್ಯದಕ್ಷತೆಯಿಂದ ಸಂಘ ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನ ಮಾಡಿದೆ ಎಂದರು.

ಸಂಘದ ಸರ್ವತೋಮುಖ ಅಭಿವೃದ್ಧಿಗೆ ಅಧ್ಯಕ್ಷರಾದ ಸಹಕಾರರತ್ನ ಕೆ.ಸೀತಾರಾಮ ರೈ ಸವಣೂರು ಅವರೊಂದಿಗೆ ಶ್ರಮಿಸುತ್ತಿರುವ ಉಪಾಧ್ಯಕ್ಷರಾದ ಎನ್.ಸುಂದರ ರೈ, ಆಡಳಿತ ಮಂಡಳಿ ಸದಸ್ಯರಾದ ಕೆ.ರವೀಂದ್ರನಾಥ ಶೆಟ್ಟಿ, ಬಿ.ಮಹಾಬಲ ರೈ ಬೋಳಂತೂರು, ಎನ್.ಜಯಪ್ರಕಾಶ ರೈ ಚೊಕ್ಕಾಡಿ, ಎಸ್.ಎಂ.ಬಾಪು ಸಾಹೇಬ್ ಸುಳ್ಯ, ವಿ.ವಿ.ನಾರಾಯಣ ಭಟ್ ನರಿಮೊಗರು, ಎನ್. ರಾಮಯ್ಯ ರೈ ತಿಂಗಳಾಡಿ, ಕೆ.ಶಂಕರ ನಾಯ್ಕ್ ಸವಣೂರು, ಅಶ್ವಿನ್ ಎಲ್. ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಜೈರಾಜ್ ಭಂಡಾರಿ ಪುತ್ತೂರು, ಮಹಾದೇವ ಎಂ ಮಂಗಳೂರು, ಪೂರ್ಣಿಮಾ ಎಸ್ ಆಳ್ವ, ಮಂಗಳೂರು, ಮಮತಾ ಎಸ್. ರೈ ಗುತ್ತುಪಾಲ್, ಮಹಾಪ್ರಬಂಧಕರಾದ ವಸಂತ ಜಾಲಾಡಿ, ಸಹಾಯಕ ಮಹಾಪ್ರಬಂಧಕರಾದ ಸುನಾದ್ ರಾಜ್ ಶೆಟ್ಟಿ ಮತ್ತು ಸಂಘದ ಎಲ್ಲ ಸಿಬ್ಬಂದಿ ವರ್ಗದವರ ಕಾರ್ಯದಕ್ಷತೆ, ಪ್ರಾಮಾಣಿಕತೆ, ಶ್ರದ್ಧಾಪೂರ್ವಕ ಸೇವೆಯಿಂದ ಸಂಘವ ಹಾಕಿಕೊಂಡಿರುವ ಕಾರ್ಯಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗಿದೆ ಎಂದರು.

ಸಂಘದ ಸದಸ್ಯರಿಗೆ ಸೋಲಾರ್ ಲೈಟ್, ವಾಟರ್ ಹೀಟರ್ ಅಳವಡಿಸುವ ವೇಳೆ ಸಾಲ ಬೇಕಾದಲ್ಲಿ ಪುತ್ತೂರಿನ ಪದ್ಮಶ್ರೀ ಸೋಲಾರ್ ಸಿಸ್ಟಮ್ ಮತ್ತು ಪದ್ಮ ಸೋಲಾರ್ ಸಿಸ್ಟಮ್ ಅವರ ಸಹಯೋಗದಲ್ಲಿ ಶೇ.0 ಬಡ್ಡಿದರದಲ್ಲಿ ಸಂಘದ ಮೂಲಕ 2 ಲಕ್ಷದವರೆಗೆ ಸಾಲ ವಿತರಿಸಲಾಗುತ್ತದೆ ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಬಿ.ಮಹಾಬಲ ರೈ ಬೋಳಂತೂರು, ಅಶ್ವಿನ್ ಎಲ್. ಶೆಟ್ಟಿ ಸವಣೂರು, ಮಹಾಪ್ರಬಂಧಕರಾದ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕರಾದ ಸುನಾದ್ ರಾಜ್ ಶೆಟ್ಟಿ, ಶಾಖಾ ವ್ಯವಸ್ಥಾಪಕ ಭರತ್ ರಾಜ್ ಕೆ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

8 hours ago