ಪ್ರಮುಖ ಸುದ್ದಿಗಳು

ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಂಗಳೂರಲ್ಲಿ ಪ್ರತಿಭಟನೆ – ಮಂಗಳೂರು ಬೆಂಗಳೂರು ಹೆದ್ದಾರಿ ಸಂಚಾರ ಬದಲಾವಣೆ

ಜಾಹೀರಾತು

ಮಂಗಳೂರು ಹೊರವಲಯದ ಅಡ್ಯಾರ್ ಸಮೀಪ ಷಾ ಗಾರ್ಡನ್ ಮೈದಾನದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಪ್ರತಿಭಟನೆ ಏಪ್ರಿಲ್ 18ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಆದೇಶ ಮಾಡಿದ್ದಾರೆ. ವಿವರ ಹೀಗಿದೆ.

ಏಪ್ರಿಲ್ 18,2025ರಂದು ಮಂಗಳೂರು ನಗರದ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶವು ನಡೆಯಲಿದ್ದು, ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿದ್ದು, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9ಗಂಟೆಯ ವರೆಗೆ ಸಂಚಾರ ದಟ್ಟಣೆ ಆಗಬಹುದಾದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಡೀಲ್ – ಕಣ್ಣೂರು – ಅಡ್ಯಾರ್ – ಸಹ್ಯಾದ್ರಿ – ಅರ್ಕುಳ (ಎರಡು ಕಡೆಯಿಂದ) ಮಾರ್ಗಗಳ ಬದಲಾಗಿ ಕೆಳಕಂಡ ಪರ್ಯಾಯ ಮಾರ್ಗಗಳನ್ನು ಉಪಯೋಗಿಸಲು ಕೋರಿದೆ. (ಸ್ಥಳೀಯ, ತುರ್ತು ಹಾಗೂ ಅತ್ಯಗತ್ಯ ಕಾರಣಗಳಿಗೆ ಬರುವ ವಾಹನಗಳನ್ನು ಹೊರತು ಪಡಿಸಿ)

ವಾಹನ ಸಂಚಾರ ದಟ್ಟಣೆಯಾಗುವ ಮಾರ್ಗಗಳು

  • ಪಂಪುವೆಲ್ / ನಂತೂರು – ಪಡೀಲ್ – ಕಣ್ಣೂರು – ಅಡ್ಯಾರ್ – ಸಹ್ಯಾದ್ರಿ – ಅರ್ಕುಳ – ಪರಂಗಿಪೇಟೆ – ತುಂಬೆ – ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – 73) ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೋಗುವ ಘನ ವಾಹನಗಳು, ಎಲ್ಲಾ ತರಹದ ಸರಕು ವಾಹನಗಳು ಹಾಗೂ ಬಸ್ಸುಗಳ ಸಂಚಾರಕ್ಕಾಗಿ ಬದಲಿ ಮಾರ್ಗ ಉಪಯೋಗಿಸುವುದು.
  • ಪಡೀಲ್ – ಕಣ್ಣೂರು – ಅಡ್ಯಾರ್ ಕಟ್ಟೆ ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೊರಡುವ ಎಲ್ಲಾ ತರಹದ ಲಘ ವಾಹನಗಳು ಮತ್ತು ದ್ವಿ-ಚಕ್ರ ವಾಹನಗಳ ಚಾಲಕರು / ಸವಾರರು ಬದಲಿ ಮಾರ್ಗ ಉಪಯೋಗಿಸುವುದು.
  • ಪಂಪುವೆಲ್ / ನಂತೂರು – ಪಡೀಲ್ – ಕಣ್ಣೂರು – ಅಡ್ಯಾರ್ – ಸಹ್ಯಾದ್ರಿ – ಅರ್ಕುಳ – ಪರಂಗಿಪೇಟೆ – ತುಂಬೆ – ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – 73) ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.

ಸಾರ್ವಜನಿಕರು ಈ ಕೆಳಗಿನಂತೆ ಪರ್ಯಾಯ ರಸ್ತೆಗಳನ್ನು ಬಳಸಲು ಕೋರಲಾಗಿದೆ.

  • ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ – ಬೊಳಿಯಾರ್ – ಮುಡಿಪು – ದೇರಳಕಟ್ಟೆ – ತೊಕ್ಕೊಟ್ಟು ಮೂಲಕ ಸಂಚರಿಸುವುದು.
  • ಬಿ.ಸಿ. ರೋಡ್ ಪೊಳಲಿ ದ್ವಾರ-ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ – ನೀರುಮಾರ್ಗ – ಬೈತುರ್ಲಿ – – ಕುಲಶೇಖರ – ನಂತೂರು ಮೂಲಕ ಸಂಚರಿಸುವುದು.
  • ವಳಚ್ಚಿಲ್ ಜಂಕ್ಷನ್-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್‌ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು – ನೀರುಮಾರ್ಗ – ಬೈತುರ್ಲಿ – ನಂತೂರು ಮೂಲಕ ಸಂಚರಿಸುವುದು.
  • ಅಡ್ಯಾರ್ ಕಟ್ಟೆ-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ – ಕೊಣಾಜೆ – ದೇರಳಕಟ್ಟೆ – ತೊಕ್ಕೊಟ್ಟು ಮೂಲಕ ಸಂಚರಿಸುವುದು.
  • ಪಂಪ್‌ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು – ದೇರಳಕಟ್ಟೆ – ಮುಡಿಪು – ಬೊಳಿಯಾರ್ – ಮೆಲ್ಕಾರ್ ಮೂಲಕ ಸಂಚರಿಸುವುದು.
  • ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ – ಕುಲಶೇಖರ – ಬೈತುರ್ಲಿ ಜಂಕ್ಷನ್ – ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
  • ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ – ಪಚ್ಚನಾಡಿ – ವಾಮಂಜೂರು  – ಬೈತುರ್ಲಿ ಜಂಕ್ಷನ್ – ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ – ಕಾವೂರು – ಬಜಪೆ – ಕೈಕಂಬ – ಮೂಡಬಿದ್ರೆ ಮೂಲಕ ಸಂಚರಿಸುವುದು.
  • ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೊಳಿ – ಮೂಡಬಿದ್ರೆ – ಸಿದ್ದಕಟ್ಟೆ – ಬಂಟ್ವಾಳ ಮೂಲಕ ಸಂಚರಿಸುವುದು.
  • ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ – ಮೂಡಬಿದ್ರೆ – ಸಿದ್ದಕಟ್ಟೆ – ಬಂಟ್ವಾಳ ಮೂಲಕ ಸಂಚರಿಸುವುದು.
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.