brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 39;
PRESS MEET
ಮುಸ್ಲಿಂ ಸಮಾಜ ಬಂಟ್ವಾಳದ ವತಿಯಿಂದ ಏ.23ರಂದು ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಯಲಿದೆ. ಈ ವಿಷಯವನ್ನು ಮುಸ್ಲಿಂ ಸಮಾಜದ ಅಧ್ಯಕ್ಷ ಕೆ.ಎಚ್.ಅಬುಬಕರ್ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಂಟ್ವಾಳ ತಾಲೂಕಿನ ವಿವಿಧ ರಾಜಕೀಯ, ಸಾಮಾಜಿಕ, ಧಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸುವರು ಎಂದವರು ಈ ಸಂದರ್ಭ ವಿವರಿಸಿದರು.
ಮುಖಂಡರಾದ ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್ ಮಾತನಾಡಿ, ಭಾರತದ ಅಭಿವೃದ್ಧಿಗೆ ಮುಸ್ಲಿಮರ ಕೊಡುಗೆ ಅಪಾರವಾಗಿದೆ. ದೇಶದ ಅವಿಭಾಜ್ಯ ಅಂಗವಾಗಿ ಮುಸ್ಲಿಮರು ಇಲ್ಲಿದ್ದು, ಸ್ವಾತಂತ್ರ್ಯಪೂರ್ವದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗೆ ಕೊಡುಗೆ ನೀಡಿದೆ. ಬ್ರಿಟಿಸರ ವಿರುದ್ಧ ನಡೆದ ಸ್ವಾತಂತ್ರ್ಯ ಸಂಗ್ರಾಮದಲ್ಲಿಯೂ ಮುಸ್ಲಿಮರ ಹೋರಾಟಗಳು ಭಾರತದ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಿಂದ ಬರೆಯಲ್ಪಟ್ಟಿದೆ. ಆದರೂ ಮುಸ್ಲಿಮರ ದೇಶಪ್ರೇಮವನ್ನು ಸದಾ ಸಂಶಯಾಸ್ಪದವಾಗಿ ಕಾಣುತ್ತಿರುವುದು ವಿಪರ್ಯಾಸ ಎಂದರು.
2014 ರಿಂದ ಎನ್.ಡಿ.ಎ. ಕೇಂದ್ರದಲ್ಲಿ ಅಧಿಕಾರ ವಹಿಸಿದ ನಂತರ ಪದೇ ಪದೇ ಮುಸ್ಲಿಮರ ಧಾರ್ಮಿಕ ಹಕ್ಕುಗಳನ್ನು ಕಸಿಯಲು ಹುನ್ನಾರ ನಡೆಸುತ್ತಿದೆ ಎಂದು ಆಪಾದಿಸಿದ ಅವರು, ಎನ್.ಆರ್.ಸಿ., ಸಿಎಎ ಯಂಥ ಕಾಯಿದೆಗಳಿಗೆ ಜನ ಸಾಮಾನ್ಯರಿಗೆ ಪ್ರತಿರೋಧ ವ್ಯಕ್ತವಾದ ನಂತರ ಇದೀಗ ಸರ್ಕಾರ ವಕ್ಫ್ ತಿದ್ದುಪಡಿ ಕಾನೂನು ತಂದು ಸಂವಿಧಾನಾತ್ಮಕ ಹಕ್ಕುಗಳ ನಿರಾಕರಿಸಲು ಸರ್ಕಾರ ಮುಂದಾಗಿದೆ ಎಂದರು. ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಮಾಜ ಬಂಟ್ವಾಳ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯಲಿದೆ.ಇದರಲ್ಲಿ ಬಂಟ್ವಾಳ ತಾಲೂಕಿನ ವಿವಿಧ ರಾಜಕೀಯ, ಧಾರ್ಮಿಕ ಸಂಘಟನೆಗಳ ಪ್ರಮುಖರು ಭಾಗವಹಿಸುವರು ಎಂದರು.ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಕಾರ್ಯದರ್ಶಿಗಳಾದ ಇಕ್ಬಾಲ್ ಐಎಂಆರ್, ಇಬ್ರಾಹಿಂ ಕೈಲಾರ್, ಶಾಹುಲ್ ಹಮೀದ್, ಹಿರಿಯ ಸದಸ್ಯರಾದ ಪಿ.ಎ. ರಹೀಂ ಉಪಸ್ಥಿತರಿದ್ಚರು.