ಬಂಟ್ವಾಳ

ಬಂಟ್ವಾಳದಲ್ಲಿ ಮುಸ್ಲಿಂ ಸಮಾಜದದಿಂದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಬಂಟ್ವಾಳ ತಾಲೂಕು ಆಡಳಿತ ಸೌಧ ಮುಂಭಾಗ ಮುಸ್ಲಿಂ ಸಮಾಜ ಬಂಟ್ವಾಳದ ವತಿಯಿಂದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ದಿನವಿಡೀ ಪ್ರತಿಭಟನೆ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ತಾಲೂಕು ಮುಸ್ಲಿಂ ಸಮಾಜ ಅಧ್ಯಕ್ಷ ಕೆ.ಎಚ್.ಅಬೂಬಕ್ಕರ್, ನಾವು ಯಾವ ಧರ್ಮದ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ, ನಮಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ. ಇದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆಯಾಗಿದೆ ಎಂದರು.

ಜಾಹೀರಾತು

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮಾಜ ಕೈಗೊಂಡಿರುವ ಪ್ರತಿಭಟನೆಗೆ ಕಾಂಗ್ರೆಸ್ ಪರವಾಗಿ ಬಂದಿದ್ದೇನೆ. ಮುಸ್ಲಿಂ ಸಮಾಜಕ್ಕೆ ಅನ್ಯಾಯವಾದಾಗ ಸಮಾಜದ ಪರ ನಿಲ್ಲುವುದು ತುಷ್ಟೀಕರಣವಲ್ಲ. ಕಾಂಗ್ರೆಸ್ ಸರಕಾರವಿದ್ದಾಗ ಎಲ್ಲರನ್ನೂ ಸಮಾನರನ್ನಾಗಿ ಕಂಡಿದ್ದೇವೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಈ ಸಂದರ್ಭ ಮಾತನಾಡಿದ ಮುಖಂಡ ರಫೀಯುದ್ದೀನ್ ಕುದ್ರೋಳಿ, ದೇಶದಲ್ಲಿ ಮುಸ್ಲಿಂ ಮತ್ತು ಹಿಂದುಗಳು ಜತೆಯಾಗಿ ಬಾಳ್ವೆ ಸಾಗಿಸುತ್ತಿದ್ದು, ಇದು ಸಂಬಂಧ ಬೇರ್ಪಡಿಸುವ ಕೃತ್ಯವಾಗಿದೆ ಎಂದರು.ಕಾಶ್ಮೀರದಲ್ಲಿ ಉಗ್ರಗಾಮಿಗಳು ನಡೆಸಿದ ಹತ್ಯಾಕಾಂಡವನ್ನು ವಿರೋಧಿಸಲಾಯಿತು. ಬಳಿಕ ಮೃತರ ಆತ್ಮಕ್ಕೆ ಶಾಂತಿಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ಮಾತನಾಡಿದ ಮುಖಂಡರು, ಕಾಶ್ಮೀರದಲ್ಲಿ ನಡೆದ ಮಾನವಹತ್ಯೆಯನ್ನು ಖಂಡಿಸಿ, ಈ ಘಟನೆಗೆ ಕಾರಣರಾದವರಿಗೆ ಉಗ್ರ ಶಿಕ್ಷೆ ನೀಡುವಂತೆ ಆಗ್ರಹಿಸಿದರು.ಕಾರ್ಯಕ್ರಮದಲ್ಲಿ ಅಮಾನುಲ್ಲಾ ಮಾಸ್ಟರ್, ಮಂಗಳೂರು ಮಾಜಿ ಮೇಯರ್ ಅಶ್ರಫ್, ಅಶ್ರಫ್ ಬದ್ರಿಯಾ, ಮುಸ್ಲಿಂ ಸಮಾಜ ಗೌರವಾಧ್ಯಕ್ಷ ಬಿ.ಎಚ್. ಅಬ್ದುಲ್ ಖಾದರ್, ಸಿರಾಜ್, ಅಬ್ಬಾಸ್ ಆಲಿ ಬೋಳಂತೂರು , ಎಂ.ಎಸ್.ಮಹಮ್ಮದ್, ಜಾಫರ್ ಫೈಜಿ, ಪಿ.ಎ.ರಹೀಂ, ಇಬ್ರಾಹಿಂ ಕೈಲಾರ್, ಶಾಹುಲ್ ಎಚ್.ಎಸ್., ಪಾಣೆಮಂಗಳುರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಬೇಬಿ ಕುಂದರ್, ಪಿಯೂಸ್ ಎಲ್ ರೋಡ್ರಿಗಸ್ ಸಹಿತ ಮುಸ್ಲಿಂ ಸಮಾಜದ ಹಾಗೂ ಇತರ ಸಮಾಜದ ಧಾರ್ಮಿಕ, ಸಾಮಾಜಿಕ ರಾಜಕೀಯ ಮುಖಂಡರು ಉಪಸ್ಥಿತರಿದ್ದರು. ಐಎಂಆರ್ ಇಕ್ಬಾಲ್ ಸ್ವಾಗತಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

21 minutes ago