ಬಂಟ್ವಾಳ

ಭಯೋತ್ಪಾದಕರು ನಡೆಸಿದ ಪೈಶಾಚಿಕ ಕೃತ್ಯ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಖಂಡನೆ

ಕಾಶ್ಮೀರ ಪಹಲ್ಗಾಮ್‌ನಲ್ಲಿ ಪಾಪಿ ಪಾಕಿಸ್ಥಾನದ ಭಯೋತ್ಪಾದಕರು ನಡೆಸಿದ ಪೈಶಾಚಿಕ ಕೃತ್ಯದಿಂದ ಅಮಾಯಕರ ಪ್ರವಾಸಿಗರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದು, ಉಗ್ರರು ಈ ಕೃತ್ಯವನ್ನು ಮಾಡುವ ಮೊದಲು ಪ್ರವಾಸಿಗರ ಧರ್ಮವನ್ನು ಕೇಳಿ ಹಿಂದೂಗಳ ಮೇಲೆಯೇ ಗುಂಡು ಹಾರಿಸಿದ್ದಾರೆ. ಘಟನೆಯನ್ನು ತೀವ್ರವಾಗಿ ಖಂಡಿಸುವ ಜತೆಗೆ ಮೃತ ಅಮಾಯಕರಿಗೆ ಆತ್ಮಕ್ಕೆ ಶಾಂತಿಯನ್ನು ಬಯಸುವ ಜತೆಗೆ ಅವರ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದ್ದಾರೆ.

ಜಾಹೀರಾತು

ಪ್ರವಾಸಿಗರ ಸ್ಮರ್ಗ ಎನ್ನುವ ಕಾರಣಕ್ಕೆ ದೇಶವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಶ್ಮೀರಕ್ಕೆ ತೆರಳುತ್ತಿದ್ದು, ಆದರೆ ಇಂತಹ ನೀಚ ಕೃತ್ಯದ ಮೂಲಕ ಉಗ್ರರು ತಮ್ಮ ರಾಕ್ಷಸೀಕತೆಯನ್ನು ಮತ್ತೆ ಪ್ರದರ್ಶಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರಕಾರವು ಭಯೋತ್ಪಾದನೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ದಿಟ್ಟ ಕ್ರಮಗಳಿಂದ ಪಾಕಿಸ್ಥಾನದ ಉಗ್ರಗಾಮಿಗಳು ಹತಾಶರಾಗಿರುವುದು ಈ ದಾಳಿಯ ಮೂಲಕ ಸ್ಪಷ್ಟಗೊಂಡಿದ್ದು, ಕೇಂದ್ರ ಸರಕಾರವು ಉಗ್ರರ ಈ ನೀಚ ಕೃತ್ಯಕ್ಕೂ ತಕ್ಕ ಉತ್ತರವನ್ನು ನೀಡಲಿದೆ.ಕೇಂದ್ರ ಸರಕಾರವು ಮೃತಪಟ್ಟಿರುವವರ ಕುಟುಂಬಗಳ ಜತೆ ನಿಲ್ಲಲಿದ್ದು, ಗಾಯಾಳುಗಳ ಆರೋಗ್ಯ ಸುಧಾರಣೆಯ ನಿಟ್ಟಿನಲ್ಲೂ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಜತೆಗೆ ಕಾಶ್ಮೀರದಲ್ಲಿ ಮತ್ತೆ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವ ವಿಶ್ವಾಸವಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.