ಪ್ರಮುಖ ಸುದ್ದಿಗಳು

ನಿವೃತ್ತ ಸರಕಾರಿ ನೌಕರರ ವೇತನ ನಷ್ಟದ ಬೇಡಿಕೆಗೆ ಪೂರಕ ಸ್ಪಂದನೆ: ಎಂಎಲ್‌ಸಿ ಐವನ್ ಡಿಸೋಜ ಜತೆಗೆ ನಿಯೋಗ ಸಿಎಂ ಭೇಟಿ


ಮಂಗಳೂರು: ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಬೇಡಿಕೆಯ ಈಡೇರಿಸಲು ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ಎಂಎಲ್‌ಸಿ ಐವನ್ ಡಿಸೋಜ ಅವರ ಜತೆಗೆ ವೇದಿಕೆಯ ಪದಾಧಿಕಾರಿಗಳು ಬೆಂಗಳೂರಿನ ಮುಖ್ಯಮಂತ್ರಿ ಅವರ ಗೃಹಕಚೇರಿ ಕಾವೇರಿ ಭವನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
7 ನೇ ವೇತನ ಆಯೋಗದಲ್ಲಿ ಜು.1,2022ರಿಂದ ಜು.31,2024ರ ಅವಧಿಯಲ್ಲಿ ನಿವೃತ್ತರಾದ ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ಡಿ.ಸಿ.ಆರ್.ಜಿ. ಕಮ್ಯೂಟೇಶನ್ ಹಾಗೂ ಗಳಿಕೆ ರಜೆ ನಗದೀಕರಣಗಳನ್ನು ಆರನೇ ವೇತನ ಆಯೋಗದ ಅನ್ವಯ ನೀಡಿದ್ದು, ಇದರಿಂದ ನೌಕರರಿಗೆ ಆರ್ಥಿಕ ನಷ್ಟ ಉಂಟಾಗಿರುವುದನ್ನು ಗಮನಕ್ಕೆ ತರಲಾಯಿತು. ಮುಖ್ಯಮಂತ್ರಿ ಯವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.


ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಸರಕರಿ ನೌಕರರ ವೇದಿಕೆಯ ರಾಜ್ಯ ಮಹಾಪ್ರಧಾನ ಸಂಚಾಲಕ ಎಂ.ಪಿ.ಎಂ.ಷಣ್ಮುಗಯ್ಯ, ಸಂಚಾಲಕರಾದ ಸ್ಟ್ಯಾನಿ ತಾವ್ರೋ, ಸುಜಾತ, ಜಲಜ,ರಂಗಣ್ಣ, ಸಿರಿಲ್ ರಾಬರ್ಟ್ ಡಿಸೋಜ, ಜಗದೀಶ್ ರಾವ್, ಮುಬಾರಕ್, ಮಂಜುಳಾರಾಣಿ ಹಾಗೂ ಮಹೇಶ್ ಉಪಸ್ಥಿತರಿದ್ದರು.
ಎಂಎಲ್‌ಸಿ ಐವನ್ ಡಿಸೋಜ ಅವರು ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯ ಬೇಡಿಕೆ ಈಡೇರಿಸುವ ಕೆಲಸದಲ್ಲಿ ಸಾಕಷ್ಟು ಮುತುವರ್ಜಿ ವಹಿಸಿದ್ದು ವೇದಿಕೆಯ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದೆ ನಿರಂತರವಾಗಿ ಸಿಎಂ ಅವರ ಗಮನಕ್ಕೆ ವಿಚಾರವನ್ನು ತರುವ ಮೂಲಕ ಬೇಡಿಕೆ ಈಡೇರಿಸಲು ಸತತ ಪ್ರಯತ್ನ ಪಡಲಾಗುವುದು ಎಂದು ಸಂಚಾಲಕ ಸ್ಟ್ಯಾನಿ ತಾವ್ರೋ ಮಾಹಿತಿ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts