ಕಾಶ್ಮೀರ ಘಟನೆ: ಹಿಂದು ಜಾಗರಣಾ ವೇದಿಕೆ ನೇತೃತ್ವದಲ್ಲಿ ಬಿ.ಸಿ.ರೋಡ್ ನಲ್ಲಿ ಪ್ರತಿಭಟನೆ

ಕಾಶ್ಮೀರದಲ್ಲಿ ಉಗ್ರಗಾಮಿಗಳು ಪ್ರವಾಸಕ್ಕೆ ತೆರಳಿದ ಹಿಂದುಗಳನ್ನು ಭೀಕರ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಹಾಗೂ ಕ್ರಮಕ್ಕೆ ಒತ್ತಾಯಿಸಿ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಹಿಂದು ಜಾಗರಣಾ ವೇದಿಕೆ ನೇತೃತ್ವದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ ನಡೆಯಿತು. ನಾನಾ ಹಿಂದು ಸಂಘಟನೆಗಳು ಈ ಸಂದರ್ಭ ಪ್ರತಿಭಟನೆಗೆ ಸಾಥ್ ನೀಡಿದರ. ಬಳಿಕ ಮೃತರಿಗೆ ಶ್ರದ್ಧಾಂಜಲಿ ಅರ್ಪಿಸಿ, ಹಣತೆಯನ್ನು ಬೆಳಗಿಸಲಾಯಿತು.

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಇಡೀ ದೇಶವೇ ತಲೆತಗ್ಗಿಸುವ ಕೃತ್ಯವಾಗಿದೆ. ಪ್ರತಿಯೊಬ್ಬ ಭಾರತೀಯನೂ ಇದನ್ನು ಖಂಡಿಸಬೇಕು. ಪ್ತಧಾನಿ ನರೇಂದ್ರ ಮೋದಿ ಕೈಗೊಳ್ಳುವ ಕ್ರಮವನ್ನು ಬೆಂಬಲಿಸಬೇಕು ಎಂದರು.

ಈ ಸಂದರ್ಭ ಮುಖಂಡರಾದ ರಾಧಾಕೃಷ್ಣ ಅಡ್ಯಂತಾಯ ಮಾತನಾಡಿ, ನಾವೆಲ್ಲ ಹಿಂದುಗಳು ಒಟ್ಟಾಗದಿದ್ದರೆ, ನಮಗೆ ಸಾವು ನಿಶ್ಚಿತ, ಭಯೋತ್ಪಾದಕ ಶಕ್ತಿಗಳಿಗೆ ಉತ್ತರ ಕೊಡುವ ಕೆಲಸವನ್ನು ಇಂದಿನಿಂದಲೇ ಪ್ರಾರಂಭಿಸೋಣ. ಎಂದರು.

ವಿಶ್ವ ಹಿಂದು ಪರಿಷತ್ ಬಂಟ್ವಾಳ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಮಾತನಾಡಿ, ಹಿಂದುಗಳನ್ನು ಹುಡುಕಿ ಕೊಲ್ಲಲಾಗುತ್ತಿದೆ,. ಹಿಂದುವಾಗಿ ಹುಟ್ಟಿದ್ದು ಅವನು ಮಾಡಿದ ತಪ್ಪೇ, ಮುಂದಿನ ಜನಾಂಗ ಬದುಕಲು ಸಾಧ್ಯವೇ ಇಲ್ಲ ಎಂಬಂಥ ವಾತಾವರಣ ಸೃಷ್ಟಿಯಾಗಿದೆ. ದೇಶದ ಮಣ್ಣನ್ನು ಒಪ್ಪಿಕೊಳ್ಳದ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆ ಕೊನೆಗಾಣಬೇಕು ಎಂದರು.

ಮುಖಂಡರಾದ ರಾಮದಾಸ ಬಂಟ್ವಾಳ ಮಾತನಾಡಿ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನು ಕಲಿಸುವ ಕುರಿತು ಪ್ರಧಾನಿ ಮೋದಿ ಹೇಳಿದ್ದನ್ನು ನೆನಪಿಸಿ, ಭಯವನ್ನು ಬಿತ್ತುವವರಿಗೆ ತಕ್ಕ ಶಾಸ್ತಿ ಮಾಡುವ ಕೆಲಸವಾಗಲಿದೆ ಎಂದರು.

ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ಮಾತನಾಡಿ, ಹಿಂದುಗಳಲ್ಲಿ ಜಾಗೃತಿ ಆಗಬೇಕು ಎಂದರು. ಹಿಂದು ಜಾಗರಣಾ ವೇದಿಕೆ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಹಿಂದುಗಳು ಎಚ್ಚರಗೊಳ್ಳಬೇಕಾಗಿದೆ ಎಂದರು. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ಈ ಸಂದರ್ಭ ಹಿಂದು ಸಂಘಟನೆ ಹಾಗೂ ಬಿಜೆಪಿ ಪ್ರಮುಖರಾದ ಜಿ.ಕೆ. ಭಟ್, ಅಜಯ್ ಕಾಂಪ್ರಬೈಲ್, ನರಸಿಂಹ ಮಾಣಿ, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಸುಲೋಚನಾ ಜಿ.ಕೆ. ಭಟ್, ತಿರುಲೇಶ್ ಬೆಳ್ಳೂರು, ಸುಜಿತ್ ಕೊಟ್ಟಾರಿ, ಪ್ತಭಾಕರ ಪ್ರಭು, ದಿನೇಶ್ ಅಮ್ಟೂರು, ಶಿವಪ್ರಸಾದ್ ಶೆಟ್ಟಿ, ಕ.ಕೃಷ್ಣಪ್ಪ, ಯಶೋಧರ ಕರ್ಬೆಟ್ಟು, ಡೊಂಬಯ ಅರಳ, ,ಭರತ್ ಕುಮ್ಡೇಲು, ರೇಷ್ಮಾ ಶಂಕರಿ ಬಲಿಪಗುಳಿ, ರತ್ನಾಕರ ಶೆಟ್ಟಿ, ಲಖಿತಾ ಶೆಟ್ಟಿ, ಕ.ಕೃಷ್ಣಪ್ಪ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಸಮಿತ್ ರಾಜ್ ದರೆಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಾಶ್ಮೀರ ಘಟನೆ: ಹಿಂದು ಜಾಗರಣಾ ವೇದಿಕೆ ನೇತೃತ್ವದಲ್ಲಿ ಬಿ.ಸಿ.ರೋಡ್ ನಲ್ಲಿ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*