ಕಲ್ಲಡ್ಕ

ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 15ನೇ ಕಲ್ಲಡ್ಕ ಶಾಖೆ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆ ಸಹಕಾರ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಜನರ ಸಹಕಾರ ಮನೋಭಾವವೇ ಕಾರಣ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ,ಬ್ರಿಜೇಶ್ ಚೌಟ ಹೇಳಿದರು. ಶನಿವಾರ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ೧೫ನೇ ಕಲ್ಲಡ್ಕ ಶಾಖೆಯನ್ನು ಕಲ್ಲಡ್ಕದ ಪ್ರೀತಿ ಟವರ್ಸ್ನ ಪ್ರಥಮ ಮಹಡಿಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಹಕಾರದ ಉದ್ಯಮವೊಂದನ್ನು ಆರಂಭಿಸಲು ಪ್ರಯತ್ನಿಸಲಾಗುವುದು ಎಂದವರು ಹೇಳಿದರು.

ಜಾಹೀರಾತು


ಕಂಪ್ಯೂಟರ್ ವ್ಯವಸ್ಥೆಯನ್ನು ಉದ್ಘಾಟಿಸಿದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ, ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಸಹಕಾರಿ ಸಂಘಗಳು ಜನಸಾಮಾನ್ಯನ ಆರ್ಥಿಕ ಶಕ್ತಿಯನ್ನು ಬಲಗೊಳಿಸುತ್ತವೆ ಎಂದರು.


ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಹಕಾರ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿವರ್ಷ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಸುಮಾರು 250 ಮಕ್ಕಳಿಗೆ ವಾರ್ಷಿಕ 5.5 ಲಕ್ಷ ರೂಗಳ ನೆರವು ನೀಡುವ ಮೂಲಕ ಸಂಘ ಸಾಮಾಜಿಕವಾಗಿ ಸ್ಪಂದಿಸುತ್ತಿದೆ ಎಂದರು.


ಉದ್ಯಮಿ ಹಾಜಿ ಎನ್.ಸುಲೈಮಾನ್ ಅವರು ಪ್ರಥಮ ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಸಹಕಾರಿಯ ನಿರ್ದೇಶಕ ಬಿ.ಮಹಾಬಲ ರೈ ಬೋಳಂತೂರು ಅವರು ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.
ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಕೆ.ರವೀಂದ್ರನಾಥ ಶೆಟ್ಟಿ ಕೇನ್ಯ, ಚಿಕ್ಕಪ್ಪ ನಾಕ್ ಅರಿಯಡ್ಕ, ಸೀತಾರಾಮ ಶೆಟ್ಟಿ ಬಿ.ಮಂಗಳೂರು, ಎಸ್.ಎಂ.ಬಾಪು ಸಾಹೇಬ್ ಸುಳ್ಯ, ವಿ.ವಿ.ನಾರಾಯಣ ಭಟ್ ನರಿಮೊಗರು, ಮಹಾದೇವ ಎಂ.ಮಂಗಳೂರು, ಎನ್.ರಾಮಯ್ಯ ರೈ ತಿಂಗಳಾಡಿ, ಪೂರ್ಣಿಮಾ ಎಸ್.ಆಳ್ವ ಮಂಗಳೂರು, ಯಮುನಾ ಎಸ್.ರೈ ಗುತ್ತುಪಾಲ್, ಮಹಾಪ್ರಬಂಧಕ ವಸಂತ್ ಜಾಲಾಡಿ, ಎಜಿಎಂ ಸುನಾದ್ ರಾಜ್ ಶೆಟ್ಟಿ, ಶಾಖಾ ವ್ಯವಸ್ಥಾಪಕ ಭರತ್ರಾಜ್ ಕೆ. ಉಪಸ್ಥಿತರಿದ್ದರು. ನಿರ್ದೇಶಕ ಜೈರಾಜ್ ಭಂಡಾರಿ ನೋಣಾಲು ವಂದಿಸಿದರು. ಪಂಜ ಶಾಖೆಯ ನಿವೃತ್ತ ಪ್ರಬಂಧಕ ಪರಮೇಶ್ವರ್ ಬಿಳಿಮಲೆ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.