ಬಂಟ್ವಾಳ

ವೀರಕಂಭ ಪರಿಸರದ ಗ್ರಾಮಗಳಲ್ಲಿ ಕಾಡುಕೋಣ ಕಾಟ

ಜಾಹೀರಾತು

ಬಂಟ್ವಾಳ ತಾಲೂಕಿನ ವೀರಕಂಭ ಸಮೀಪದ ಕೆಲ ಗ್ರಾಮಗಳಲ್ಲಿ ಕಾಡುಕೋಣದ ಕಾಟ ಹೆಚ್ಚಾಗಿದೆ ಎಂದು ಕೃಷಿಕರು ದೂರಿದ್ದಾರೆ. ಸ್ಥಳೀಯವಾಗಿ ಕಾಟಿ ಎನ್ನುವ ಈ ಕೋಣಗಳು, ತೋಟಕ್ಕೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಹಾನಿಯನ್ನು ಉಂಟುಮಾಡುತ್ತಿರುವ ವಿಚಾರವೀಗ ಆತಂಕಕ್ಕೀಡುಮಾಡಿದೆ. ಕೃಷಿ ಕೂಲಿ ಕಾರ್ಮಿಕರು ಹಾಗೂ ಕೃಷಿಕರು ಇದರಿಂದ ತೋಟಕ್ಕೆ ತೆರಳಲೂ ಆತಂಕಪಡುವಂಥ ಸ್ಥಿತಿ ಬಂದೊದಗಿದೆ.

ಬಂಟ್ವಾಳ ತಾಲೂಕಿನ ವೀರಕಂಭದಿಂದ ಅನಂತಾಡಿ ಗ್ರಾಮದ ಗಡಿ ಭಾಗದಲ್ಲಿ ರಕ್ಷಿತಾರಣ್ಯ ಪ್ರದೇಶವಿದ್ದು, ಇಲ್ಲಿಂದ ಕಾಡುಕೋಣಗಳು ಕೃಷಿ ತೋಟಗಳಿಗೆ ನುಗ್ಗುತ್ತವೆ ಎನ್ನಲಾಗಿದೆ. ಇದರಿಂದ ತೊಂದರೆಗೆ ಒಳಗಾದ ಕೃಷಿಕ ರಾಮಪ್ರಸಾದ್ ಶೆಟ್ಟಿ ಕೊಂಬಿಲ ಅವರು ಈ ಕುರಿತು ಅಡಣ್ಯ ಇಲಾಖೆ ಗಮನಕ್ಕೆ ತರಲಾಗಿದೆ ಎಂದಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ-ಬಾಳೆ ಗಿಡಗಳನ್ನು ನಾಶ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.  ಉಡುಪಿ ಕಾಸರಗೋಡು ೪೦೦ ಕೆವಿ ವಿದ್ಯುತ್ ಲೈನ್‌ಗಾಗಿ ಮರಗಳನ್ನು ಕಡಿಯಲಾಗಿದ್ದು, ಈ ಹಾದಿಯ ಮೂಲಕ ಕೋಣಗಳು ತೋಟಕ್ಕೆ ನುಗ್ಗುತ್ತಿವೆ ಎಂದು ಆರೋಪಿಸಲಾಗಿದೆ. ಕೋಣಗಳ ದಾಳಿಯಿಂದ ದೂರುಗಳು ಬಂದರೆ ಅದರ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಬಂಟ್ವಾಳ ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts