ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ

ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬುಧವಾರ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಚುನಾವಣೆ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಅವರು ದೀಪ ಬೆಳಗಿಸಿ ಶುಭ ಹಾರೈಸಿದರು.

ಜಾಹೀರಾತು

ಈ ಸಂದರ್ಭ ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು ಮಾತನಾಡಿ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನವರು ಅಸಮಾನತೆಯನ್ನು ಹೋಗಲಾಡಿಸಲು ಹೋರಾಡಿದ ರೀತಿ ಅದ್ಭುತವಾದದ್ದು. ತಾರತಮ್ಯಗಳನ್ನು ನಿವಾರಿಸಿ ಸಾಮಾಜಿಕ ಸಮಾನತೆಯ ಉದಾತ್ತ ಚಿಂತನೆಗಳನ್ನು ಸಾಕಾರಗೊಳಿಸಲು 12 ನೇ ಶತಮಾನದಲ್ಲಿಯೇ ಪಣತೊಟ್ಟ ಮಹಾನುಭಾವ ಬಸವಣ್ಣನವರು ಎಂದ ಹೇಳಿದರು.

ಈ ಸಂದರ್ಭ ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ದನ್ ಜೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*