ಪ್ರಮುಖ ಸುದ್ದಿಗಳು

ವಾಮಂಜೂರಿನಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 16ನೇ ಶಾಖೆ ಉದ್ಘಾಟನೆ

ಮಂಗಳೂರು ಹೊರವಲಯದ ವಾಮಂಜೂರಿನ ಬಾವಾ ಬಿಲ್ಡರ್ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 16ನೇ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಬುಧವಾರ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು.

ಜಾಹೀರಾತು

ವಿಶ್ವಾಸಾರ್ಹ ಸೇವೆ ನೀಡುತ್ತಿರುವ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಎಲ್ಲ ಹದಿನೈದು ಶಾಖೆಗಳನ್ನು ಉದ್ಘಾಟಿಸುವ ಅವಕಾಶ ತನಗೆ ದೊರಕಿದ್ದು, ಇದೀಗ 16ನೇ ಶಾಖೆಯನ್ನೂ ಉದ್ಘಾಟಿಸುವ ಯೋಗ ನನಗೆ ಒದಗಿಬಂದಿದೆ. ಮೂರ್ತೆದಾರಿಕೆ ಕಸುಬು ಮಾಡಲು ತೊಂದರೆ ಆಗುತ್ತಿದ್ದ ಸಂದರ್ಭ ಆರ್ಥಿಕ ಶಕ್ತಿ ನೀಡಲು ಆರಂಭಗೊಂಡ ಸಹಕಾರ ಸಂಘ ಇದೀಗ ಬಲಿಷ್ಠವಾಗಿದೆ ಎಂದು ರೈ ಶುಭ ಹಾರೈಸಿದರು.

ಭದ್ರತಾ ಕೋಶವನ್ನು ಉದ್ಘಾಟಿಸಿದ ಮಂಗಳೂರು ಉತ್ತರ ಶಾಸಕ ಡಾ ವೈ. ಭರತ್ ಶೆಟ್ಟಿ ಮಾತನಾಡಿ, ಸಹಕಾರ ಸಂಘ ನಡೆಸುವುದು ದೊಡ್ಡ ಸವಾಲಾಗಿರುವ ಈ ಹೊತ್ತಿನಲ್ಲಿ ಸಾಮಾಜಿಕವಾಗಿ ತೊಡಗಿಸಿಕೊಂಡಿರುವ ಸಂಜೀವ ಪೂಜಾರಿಯವರು ಇಡೀ ತಂಡದೊಂದಿಗೆ ಸಂಘವನ್ನು ಕಟ್ಟಿ ಬೆಳೆಸಿದ್ದು, ಅಭಿನಂದನಾರ್ಹ. ಆರ್ಥಿಕ ಶಿಸ್ತು ಹೊಂದಿ ಮುನ್ನಡೆಯುತ್ತಿರುವುದು ಸಂತಸದಾಯಕ ವಿಚಾರವಾಗಿದೆ ಎಂದು ಶ್ಲಾಘಿಸಿದರು.

ಇಸ್ಲಾಹುಲ್ ಇಸ್ಲಾಂ ಮದರಸ ಮತ್ತು ಜುಮ್ಮಾ ಮಸ್ಜಿದ್ ಖತೀಬರಾದ ಅಬ್ದುಲ್ ರಹಿಮಾನ್ ಕೋಯ, ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಓಂ ಪ್ರಕಾಶ್ ಶೆಟ್ಟಿ, ಮಾಜಿ ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್, ರಾಜ್‌ಕುಮಾರ್ ಶೆಟ್ಟಿ ತಿರುವೈಲುಗುತ್ತು, ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ , ವಾಮಂಜೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಮಾರಪ್ಪ ಪೂಜಾರಿ, ಮಹಿಳಾ ಸಹಕಾರಿ ಸಂಘದ ನಿರ್ದೇಶಕಿ ಜಯಂತಿ, ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರ ಮಂಡಲದ ನಿರ್ದೇಶಕರಾದ ಪದ್ಮನಾಭ ಕೋಟ್ಯಾನ್, ಗಣೇಶ್ ಪೂಜಾರಿ, ಶಿವಪ್ಪ ಸುವರ್ಣ, ವಾಮಂಜೂರು ಅಮೃತೇಶ್ವರ ಹೊಟೇಲ್ ಮಾಲೀಕರಾದ ವೀರಣ್ಣ ಎಂ.ಪೂಜಾರಿ, ವಾಮಂಜೂರು ವಿಶ್ವಕರ್ಮ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ, ವಾಮಂಜೂರು ನೇತಾಜಿ ಆಟೋರಿಕ್ಷಾ ಚಾಲಕ, ಮಾಲಕ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಅತಿಥಿಗಳಾಗಿ ಭಾಗವಹಿಸಿ‌ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷರಾದ ವಿಠಲ ಬೆಳ್ಚಾಡ ಚೇಳೂರು, ನಿರ್ದೇಶಕರಾದ ಸುಂದರ ಪೂಜಾರಿ ಬೀಡಿನಪಾಲು, ಜಯಶಂಕರ್ ಕಾನ್ಸಾಲೆ, ಕೆ. ಸುಜಾತ ಎಂ., ವಾಣಿ ವಸಂತ, ಆಶಿಶ್ ಪೂಜಾರಿ, ಚಿದಾನಂದ ಎಂ ಕಡೇಶಿವಾಲಯ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಮಮತಾ ಜಿ., ಶಾಖಾ ವ್ಯವಸ್ಥಾಪಕಿ ಅಶ್ವಿನಿ ಕಿರಣ್ ಉಪಸ್ಥಿತರಿದ್ದರು.

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಾಮಂಜೂರಿನ ಎಲ್ಲರ ಸಹಕಾರ ಅಗತ್ಯವಾಗಿದ್ದು, ಸಜೀಪದಲ್ಲಿ ಐದು ಕೋಟಿ ರೂ ವೆಚ್ಚದಲ್ಲಿ ಪ್ರಧಾನ ಕಚೇರಿ ನಿರ್ಮಾಣವಾಗಲಿದೆ ನೂರು ಮಂದಿ ಮಹಿಳೆಯರಿಗೆ ಕೆಲಸ ನೀಡುವ ಇಚ್ಛೆ ಇದ್ದು, 25 ಶಾಖೆ ನಿರ್ಮಾಣದ ಗುರಿ ಇದೆ ಎಂದರು. ಈ ಸಂದರ್ಭ ಸಹಕಾರ ನೀಡಿದ ಮೋಹನದಾಸ್ ಬಂಗೇರ ವಾಮಂಜೂರು ಅವರನ್ನು ಗೌರವಿಸಲಾಯಿತು. ಸಂಘದ ನಿರ್ದೇಶಕ‌ ರಮೇಶ್ ಅನ್ನಪ್ಪಾಡಿ ಸ್ವಾಗತಿಸಿದರು. ನಿರ್ದೇಶಕರಾದ ಅರುಣ್ ಕುಮಾರ್ ಎಂ. ವಂದಿಸಿದರು. ನಿರ್ದೇಶಕ ಗಿರೀಶ್ ಕುಮಾರ್ ಪೆರ್ವ ಕಾರ್ಯಕ್ರಮ ನಿರ್ವಹಿಸಿದರು. ಬ್ಯಾಂಕಿನ ನಿರಖು ಠೇವಣಿ ಪತ್ರವನ್ನು ವಿತರಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts