ಪ್ರಮುಖ ಸುದ್ದಿಗಳು

ಅಹಿತಕರ ಘಟನೆ ಹಿನ್ನೆಲೆ: ದಕ್ಷಿಣ ಕನ್ನಡದಾದ್ಯಂತ ನಿಷೇಧಾಜ್ಞೆ

ಮಂಗಳೂರು: ದಿನಾಂಕ 01.05.2025ರಂದು ಮಂಗಳೂರಿನ ಬಜ್ಪೆ ಪರಿಸರದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕ 05.05.2025ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿರುತ್ತಾರೆ. ಮಂಗಳೂರಿನಲ್ಲಿ ಈಗಾಗಲೇ ಮೇ. 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.

ನಿಷೇಧಾಜ್ಞೆ ಹಿನ್ನಲೆಯಲ್ಲಿ ಯಾವುದೇ ಕೂಗನ್ನುಉಚ್ಚರಿಸುವುದು, ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು, ಚಿತ್ರಗಳ ಮೂಲಕ, ಜಾಲತಾಣಗಳ ಮೂಲಕ ಪ್ರದರ್ಶನ, ಪ್ರಸಾರ ಮಾಡುವುದು, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಕೃತ್ಯ ಎಸಗುವುದು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದು ನಿಷೇಧಿಸಲಾಗಿದೆ. ಯಾವುದೇ ರೀತಿಯ ಶಸ್ತ್ರಗಳು, ದೊಣ್ಣೆಗಳು, ಮಾರಕಾಯುಧಗಳು ಸಾಗಾಟ ಮಾಡುವುದು ನಿಷೇಧಿಸಲಾಗಿದೆ. ಪಟಾಕಿಗಳನ್ನುಸಿಡಿಸುವುದು, ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಜಾಹೀರಾತು

ಯಾರದೇ ವ್ಯಕ್ತಿಗಳ ಪ್ರತಿಕೃತಿ ಪ್ರದರ್ಶನ ಮಾಡುವುದು, ಸರಕಾರಿ ಸಂಸ್ಥೆಗಳು, ಸಂಘಟನೆಗಳು, ಅಧಿಕಾರಿ ಸಿಬ್ಬಂದಿ ನಿಂದನೆ, ಅವಹೇಳನಕಾರಿ ಘೋಷಣೆ, ಪ್ರಚೋದನಾಕಾರಿ ಭಾಷಣ, ಗಾಯನ ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆ ಪ್ರದೇಶದಲ್ಲಿ ಸರಕಾರದ ಆದೇಶದಂತೆ ನಡೆಯುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.