ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರದಲ್ಲಿ ಕಾಶಿ ಸಂಸ್ಥಾನ ಮಠಾಧೀಶ್ವರ 1008 ಜಗದ್ಗುರು ಪೀಠ ವಾರಣಾಸಿಯ ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯ ಮತ್ತು ಮಾರ್ಗದರ್ಶನದಲ್ಲಿ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಯಾಗ ನಡೆಯಿತು.
ಯಾಗ ಸಮಿತಿ ಅಧ್ಯಕ್ಷ ಬ್ರಹ್ಮಾನಂದ ರೆಡ್ಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಗೌರವಾಧ್ಯಕ್ಷ ರಘುನಾಥ ಸೋಮಯಾಜಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಕೋಶಾಧಿಕಾರಿ ಸೂರಜ್ ಶೆಟ್ಟಿ ಮಂಗಳೂರು ನೇತೃತ್ವದಲ್ಲಿ ವಿದ್ವಾನ್ ಅನಂತರಾಮ ಐತಾಳ್ ಪೌರೋಹಿತ್ಯದಲ್ಲಿ ಸುಮಾರು 300ರಷ್ಟು ಋತ್ವಿಜ್ಞರ ಉಪಸ್ಥಿತಿಯಲ್ಲಿ 11 ಯಜ್ಞಕುಂಡಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಊರ, ಪರವೂರ ಭಕ್ತರು ಆಗಮಿಸಿ, ಪ್ರಸಾದ ಸ್ವೀಕರಿಸಿದರು. ಸಮಿತಿ ಉಪಾಧ್ಯಕ್ಷರಾದ ಗಣೇಶ್ ರಾವ್ ಬರಿಮಾರು, ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು, ಸಚಿನ್ ರೈ ಮಾಣಿಗುತ್ತು, ಮೂಲ್ಯ ಅಮ್ಟೂರು, ದೇವದಾಸ್ ಪೂಜಾರಿ ಅಡ್ಯನಡ್ಕ, ಅರ್ಚಕ ಸಂಪ್ರೀತ್ ಭಟ್ ಸಹಿತ ಸಮಿತಿಯ ನಾನಾ ಪದಾಧಿಕಾರಿಗಳು, ಪ್ರಮುಖರು ನಾನಾ ಜವಾಬ್ದಾರಿಗಳನ್ನು ನಿರ್ವಹಿಸಿದರು..
ಜಗದ್ಗುರು ಕಾಶಿಪೀಠ ವಾರಣಾಸಿಯ ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಅಂಜನಾಪುರ ಚಿಕ್ಕಮಗಳೂರಿನ ಶಿವಾನಂದಾಶ್ರಮದ ಸ್ವಾಮಿ ಚಿದಾನಂದಗಿರಿ, ರಾಜಸ್ಥಾನದ ಕೇದಾರಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ,ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಮೂಡುಬಿದಿರೆ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸಹಿತ ಸಂತರು, ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ಯು. ನಾಯ್ಕ್, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಕಟೀಲು ಕ್ಷೇತ್ರದ ಅರ್ಚಕರಾದ ಶ್ರೀ ವೆಂಕಟರಮಣ ಆಸ್ರಣ್ಣ, ವಾಸುದೇವ ಆಸ್ರಣ್ಣ, ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಮಲ್ಲಿಕಾ ಪಕ್ಕಳ ಸಹಿತ ಊರ, ಪರವೂರ ಗಣ್ಯರು ಆಗಮಿಸಿದರು. ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠದ ವಿದ್ವಾನ್ ಗಣಪತಿ ಭಟ್ ತಿರುಪಳ್ಳಿ ಅವರು ಯಾಗದ ಮಹತ್ವವನ್ನು ಪ್ರಸ್ತುತ ಸನ್ನಿವೇಶದ ಕಾಲಘಟ್ಟದಲ್ಲಿ ಅನಿವಾರ್ಯತೆ ಕುರಿತು ವಿವರಿಸಿದರು.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)