ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಸಚಿವರ ನಿರ್ದೇಶನ, ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆಯಲ್ಲಿ ತಿಳಿಸಲಾದಂತೆ ಸೇನೆಗೆ ಮತ್ತಷ್ಟು ಶಕ್ತಿ ದೊರಕಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಭಯೋತ್ಪಾದಕರ ಶಿಬಿರಗಳ ಮೇಲೆ ಅಪರೇಷನ್ ಸಿಂಧೂರ ಹೆಸರಿನಲ್ಲಿ ನಡೆದ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿರುವ ಹೆಮ್ಮೆಯ ಸೇನಾ ಯೋಧರಿಗೆ ಒಳಿತಾಗಲಿ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸಲಾಯಿತು.