ಕಾನೂನು ಸುವ್ಯವಸ್ಥೆ: ಸ್ಪೀಕರ್, ಉಸ್ತುವಾರಿ ಸಚಿವರಿಂದ ಪರಿಶೀಲನೆ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ನಂತರ ಸಹಜ ಸ್ಥಿತಿ ಮರುಕಳಿಸಿದ್ದು, ಪ್ರಸಕ್ತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ಗುರುವಾರ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜನರ ಸುರಕ್ಷತೆ ಸರಕಾರದ ಗರಿಷ್ಠ ಆದ್ಯತೆಯಾಗಿದೆ. ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಯಾವುದೇ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ ಎಂದು ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಸೂಚಿಸಿದರು. ಜನಸಾಮಾನ್ಯರಲ್ಲಿ ನೆಮ್ಮದಿಯ ವಾತಾವರಣ ಮೂಡಿಸುವುದೇ ಸರಕಾರದ ಆದ್ಯತೆ. ಹೆಚ್ಚುವರಿ ಭದ್ರತೆಯನ್ನು ಇನ್ನೂ ಸ್ವಲ್ಪ ಕಾಲ ಮುಂದುವರಿಸಬೇಕು ಎಂದು ಸಚಿವರು ತಿಳಿಸಿದರು.

ಪ್ರಸ್ತುತ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ ಪೆÇಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಪರಿಸ್ಥಿತಿ ಈಗ ಎಂದಿನಂತೆ ಸಹಜ ಸ್ಥಿತಿಗೆ ಮರಳಿದೆ. ಆಯಾ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೆÇಲೀಸ್ ಅಧಿಕಾರಿಗಳು ಸಂಜೆ ಬಳಿಕ ನಿರಂತರ ರೌಂಡ್ಸ್ ನಲ್ಲಿದ್ದಾರೆ. ಹೊರ ಜಿಲ್ಲೆಯ ಪೆÇಲೀಸರು ಹಾಗೂ ಕೆ.ಎಸ್.ಆರ್.ಪಿ. ತುಕಡಿಗಳನ್ನು ಹೆಚ್ಚುವರಿ ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಡಿಸಿಪಿ ಸಿದ್ಧಾರ್ಥ ಗೋಯಲ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋಧನಕಾರಿ ಸಂದೇಶಗಳನ್ನು ಹರಡುವವರ ವಿರುದ್ಧ ನಿಗಾ ಇಡಲಾಗಿದೆ. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಅಪರಾಧ ಹಿನ್ನಲೆಯುಳ್ಳ ವ್ಯಕ್ತಿಗಳ ಮೇಲೂ ನಿಗಾ ಇಡಲಾಗಿದೆ ಎಂದರು.ಪೆÇಲೀಸ್ ವರಿμÁ್ಠಧಿಕಾರಿ ಯತೀಶ್ ಅವರು ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಎಲ್ಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಗಾ ಇಡಲಾಗಿದೆ ಎಂದು ತಿಳಿಸಿದರು.ವೀಡಿಯೋ ಕಾನ್ಫೆರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಆನಂದ್ ಮತ್ತಿತರರು ಭಾಗವಹಿಸಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾನೂನು ಸುವ್ಯವಸ್ಥೆ: ಸ್ಪೀಕರ್, ಉಸ್ತುವಾರಿ ಸಚಿವರಿಂದ ಪರಿಶೀಲನೆ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*