ಕಾಮಿಡಿ ಕಿಲಾಡಿ ಖ್ಯಾತಿಯ ವಿಶ್ವರೂಪ್ ಎಂದೇ ಪ್ರಸಿದ್ಧರಾಗಿದ್ದ ರಾಕೇಶ್ ಪೂಜಾರಿ ಇನ್ನಿಲ್ಲ

ಉಡುಪಿ:  ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದರು.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಲೋಬಿಪಿ ಸಮಸ್ಯೆ ಉಂಟಾಗಿ, ಪಲ್ಸ್ ರೇಟ್ ಕಡಿಮೆಯಾಗಿದೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.. ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ವಿಶ್ವರೂಪ್ ಎಂಬ ಪಾತ್ರದ ಮೂಲಕ ಹಾಸ್ಯದ ಹೊನಲು ಹರಿಸಿದ್ದ ರಾಕೇಶ್ ಪೂಜಾರಿ ಬಳಿಕ ವಿಶ್ವರೂಪ್ ಎಂದೇ ಜನಪ್ರಿಯತೆ ಪಡೆದಿದ್ದರು. ಅವರು ಹಲವು ವರ್ಷಗಳಿಂದ ಹಾಸ್ಯ ಪಾತ್ರಗಳನ್ನು ಮಾಡುತ್ತಿದ್ದರು. ಪೆಟ್ ಕಮ್ಮಿ, ಅಮ್ಮೆರ್ ಪೊಲೀಸ್, ಉಮಿಲ್, ಇದು ಎಮಥ ಲೋಕವಯ್ಯ, ಪೈಲ್ವಾನ್ ಸಿನಿಮಾಗಳಲ್ಲಿ ನಟಿಸಿದ್ದರು. ಕಾಮಿಡಿ ಕಿಲಾಡಿಗಳು’ ವೇದಿಕೆ ಅವರ ಬದುಕನ್ನು ಬದಲಿಸಿತು. ‘ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್​ನಲ್ಲಿ ಅವರು ಗೆಲುವು ಸಾಧಿಸಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು.

ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ನಿನ್ನೆಯೇ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಇದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾಮಿಡಿ ಕಿಲಾಡಿ ಖ್ಯಾತಿಯ ವಿಶ್ವರೂಪ್ ಎಂದೇ ಪ್ರಸಿದ್ಧರಾಗಿದ್ದ ರಾಕೇಶ್ ಪೂಜಾರಿ ಇನ್ನಿಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*