ಉಡುಪಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದರು.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಲೋಬಿಪಿ ಸಮಸ್ಯೆ ಉಂಟಾಗಿ, ಪಲ್ಸ್ ರೇಟ್ ಕಡಿಮೆಯಾಗಿದೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.. ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ವಿಶ್ವರೂಪ್ ಎಂಬ ಪಾತ್ರದ ಮೂಲಕ ಹಾಸ್ಯದ ಹೊನಲು ಹರಿಸಿದ್ದ ರಾಕೇಶ್ ಪೂಜಾರಿ ಬಳಿಕ ವಿಶ್ವರೂಪ್ ಎಂದೇ ಜನಪ್ರಿಯತೆ ಪಡೆದಿದ್ದರು. ಅವರು ಹಲವು ವರ್ಷಗಳಿಂದ ಹಾಸ್ಯ ಪಾತ್ರಗಳನ್ನು ಮಾಡುತ್ತಿದ್ದರು. ಪೆಟ್ ಕಮ್ಮಿ, ಅಮ್ಮೆರ್ ಪೊಲೀಸ್, ಉಮಿಲ್, ಇದು ಎಮಥ ಲೋಕವಯ್ಯ, ಪೈಲ್ವಾನ್ ಸಿನಿಮಾಗಳಲ್ಲಿ ನಟಿಸಿದ್ದರು. ಕಾಮಿಡಿ ಕಿಲಾಡಿಗಳು’ ವೇದಿಕೆ ಅವರ ಬದುಕನ್ನು ಬದಲಿಸಿತು. ‘ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್ನಲ್ಲಿ ಅವರು ಗೆಲುವು ಸಾಧಿಸಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು.
ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ನಿನ್ನೆಯೇ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಇದೆ.