ಬಂಟ್ವಾಳ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿಯಲ್ಲಿ ಮೇ 26ರಂದು ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ ಎಂದು ಲೋಕಾಯುಕ್ತ ಮಂಗಳೂರು ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು, ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.
ಅರ್ಜಿದಾರರು ನಮೂನೆ | & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ. ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001ರವರಿಗೆ ಸಲ್ಲಿಸುವುದು ಎಂದು ಪೊಲೀಸ್ ಅಧೀಕ್ಷಕ ಕುಮಾರಚಂದ್ರ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…