ಪುತ್ತೂರು ಕಬಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಅಸುನೀಗಿದ ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್ ಬೋರುಗುಡ್ಡೆ ಅವರ ಮನೆಗೆ ದಕ್ಷಿಣ ಕನ್ನಡ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.
ಸಂಸದರ ಜೊತೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಆರ್. ಕೋಟ್ಯಾನ್ ಹಾಗು ಸ್ಥಳೀಯ ಪಂಚಾಯತ್ ಸದಸ್ಯರು ,ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭ ಸಂಸದರು ಮನೆಯವರಿಗೆ ಆರ್ಥಿಕ ಸಹಾಯ ನೀಡಿದರು.