ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಮೇ 18 ಮತ್ತು 19ರಂದು ಕ್ಷೇತ್ರ ಪರಿಸರದಲ್ಲಿರುವ ಅಶ್ವತ್ಥ ಸಾನಿಧ್ಯದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಅಶ್ವತ್ಥ ಉಪನಯನ ಹಾಗೂ ವಿವಾಹ ಸಂಸ್ಕಾರ ಕಾರ್ಯಕ್ರಮಗಳು ನಡೆದವು.
ಜಾಹೀರಾತು
18ರಂದು ಸಂಜೆ ಪ್ರಾರ್ಥನೆ, ಆರೂಢ ಪರಿಗ್ರಹ, ಪುಣ್ಯಾಹ, ಆರೂಢ ಶೂದ್ಧಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತುಬಲಿ ಕಾರ್ಯಕ್ರಮಗಳು ನಡೆದರೆ, 19ರಂದು ಬೆಳಗ್ಗೆ ಗಣಪತಿ ಹೋಮ, ಬಳಿಕ ಅಶ್ವತ್ಥ ಉಪನಯನ, ಹಾಗೂ ವಿವಾಹ ಸಂಸ್ಕಾರ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಬಿ.ಸಿ.ರೋಡಿನ ನ್ಯೂ ವಿಜಯಾ ಸ್ವೀಟ್ಸ್ ನ ಎಚ್. ಪ್ರಶಾಂತ್ ಭಟ್ ದಂಪತಿ ಸೇವಾ ಕಾರ್ಯ ನಡೆಸಿಕೊಟ್ಟರು. ಈ ಸಂದರ್ಭ ಆಡಳಿತ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ ಹಾಗೂ ಸದಸ್ಯರು, ದೇವಸ್ಥಾನದ ಭಕ್ತರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ, ವಿವಾಹ ಸಂಸ್ಕಾರ ಕಾರ್ಯಕ್ರಮ"
Be the first to comment on "ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ, ವಿವಾಹ ಸಂಸ್ಕಾರ ಕಾರ್ಯಕ್ರಮ"