ಬಂಟ್ವಾಳ

ಇರಿತ ಪ್ರಕರಣ: ಹಲವರ ವಿಚಾರಣೆ, ಆರೋಪಿಗಳ ಸುಳಿವಿಲ್ಲ

ಶುಕ್ರವಾರ ರಾತ್ರಿ ನಡೆದ ಘಟನೆಯಲ್ಲಿ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಅಕ್ಕರಂಗಡಿ ನಿವಾಸಿ ಹಮೀದ್ ಎಂಬವರಿಗೆ ಇರಿದ ಪ್ರಕರಣಕ್ಕೆ ಸಂಬಂಸಿದಂತೆ ಬಂಟ್ವಾಳ ಪೊಲೀಸರು ಹಲವರ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಆರೋಪಿಗಳ ಸುಳಿವು ಪತ್ತೆಯಾಗಿಲ್ಲ.

ಜಾಹೀರಾತು

ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಬಂಟ್ವಾಳ ಡಿ.ವೈ.ಎಸ್.ಪಿ.ವಿಜಯ ಪ್ರಸಾದ್ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳು ಪ್ರಕರಣದ ತನಿಖೆ ಆರಂಭಿಸಿತ್ತು. ಅಬ್ದುಲ್ ಹಮೀದ್ ಶುಕ್ರವಾರ ರಾತ್ರಿ ಸಮಯ ಸುಮಾರು ೭.೪೫ ಗಂಟೆಗೆ ಕ್ಯಾಂಟೀನೊಂದಕ್ಕೆ ಬಂದು ತಂಪು ಪಾನೀಯವನ್ನು ಕುಡಿದು ಪೋನಿನಲ್ಲಿ ಮಾತನಾಡಿಕೊಂಡಿದ್ದಾಗ, ಅಲ್ಲಿಗೆ ಇಬ್ಬರು ಅಪರಿಚಿತರು ಬೈಕಿನಲ್ಲಿ  ಬಂದಿದ್ದು, ಅವರುಗಳ ಪೈಕಿ ಓರ್ವ ತಾನು ತಂದಿದ್ದ ತಲವಾರಿನಿಂದ ಅಬ್ದುಲ್ ಹಮೀದ್ ಅವರಿಗೆ ಹಲ್ಲೆ ನಡೆಸಿರುತ್ತಾನೆ. ತಲವಾರಿನಿಂದ ಕಡಿದ ಪರಿಣಾಮ ಎಡಕೈಗೆ ಗಾಯವಾಗಿರುತ್ತದೆ. ಗಾಯಗೊಂಡ  ಅಬ್ದುಲ್ ಹಮೀದ್ ಬೊಬ್ಬೆ ಹಾಕಿ ಓಡಿದಾಗ ಆರೋಪಿಗಳು ಅದೇ ಬೈಕಿನಲ್ಲಿ ಹೋಗಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts