ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಮೊಹಮ್ಮದ್ ಆಸ್ಕರ್ ಆಲಿ(31) ಗಾಯಗೊಂಡವರು. ನರಿಕೊಂಬು ಗ್ರಾಮದ ಪಾಣೆಮಂಗಳೂರು ಟಾಟ ಮೋಟಾರ್ಸ್ ಎದುರು ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ಕಾರು ಬಿಸಿರೋಡಿನಿಂದ ಬರುತ್ತಿದ್ದ ರಿಕ್ಷಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಮೊಹಮ್ಮದ್ ಆಸ್ಕರ್ ಆಲಿ ಅವರನ್ಬು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ವಿರುದ್ಧ ಪ್ರಕರಣ ದಾಖಲಾಗಿದೆ.ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.