ಬಂಟ್ವಾಳ

ಕೃಷಿ ಹೊಂಡ ನಿರ್ಮಾಣ: ಕೃಷಿ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೃಷಿ ಹೊಂಡ ನಿರ್ಮಾಣಕ್ಕೆ ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿನಲ್ಲಿ ಬಂಟ್ವಾಳ ತಾಲೂಕಿನಲ್ಲಿ  ಒಟ್ಟು ಸಾಮಾನ್ಯ ವರ್ಗಕ್ಕೆ 24, ಪರಿಶಿಷ್ಟ ಜಾತಿ 5, ಪರಿಶಿಷ್ಟ ಪಂಗಡ ರೈತರಿಗೆ 2, ಕೃಷಿ ಹೊಂಡ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ. 1 ಎಕರೆ ಮೇಲ್ಪಟ್ಟು ಸಾಗುವಳಿ ವಿಸ್ತೀರ್ಣ ಹೊಂದಿರುವ ರೈತರು ತಮ್ಮ ವ್ಯಾಪ್ತಿಯ ರೈತಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಳೆಗಾಲ ಆರಂಭಕ್ಕೆ ಮುನ್ನ ಆಧಾರ್, ಆರ್.ಟಿ.ಸಿ, ಬ್ಯಾಂಕ್ ವಿವರಗಳೊಂದಿಗೆ ಅರ್ಜಿ ಸಲ್ಲಿಸಲು ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರು ವಿನಂತಿಸಿದ್ದಾರೆ.

ಜಾಹೀರಾತು

ಮಳೆ ನೀರು ಸಂಗ್ರಹಿಸಿ ಅಗತ್ಯ ಬಿದ್ದಾಗ ಬೆಳೆಗಳಿಗೆ ನೀರುಣಿಸಲು ಪೂರಕವಾದ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಜಿಲ್ಲೆಯ ರೈತರು ಉತ್ಸುಕತೆ ತೋರುತ್ತಿದ್ದಾರೆ.  ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸರಕಾರ ಶೇ.90 ರಷ್ಟು ಸಹಾಯಧನ ನೀಡುತ್ತಿದೆ.  ಬಂಟ್ವಾಳ ತಾಲೂಕಿನಲ್ಲಿ ಕಳೆದ ಸಲ  ಒಟ್ಟು 48 ಕೃಷಿ ಹೊಂಡ ನಿರ್ಮಿಸುವ ಗುರಿ ಇತ್ತು. 48 ರೈತರು  ಅರ್ಜಿ ಸಲ್ಲಿಸಿದ್ದರು.ಗುರಿಯಂತೆ 48 ಫಲಾನುಭವಿಗಳು ಕೃಷಿ ಹೊಂಡವನ್ನು ಸರಕಾರದ ಸಹಾಯಧನ ಪಡೆದು ನಿರ್ಮಿಸಿಕೊಂಡಿದ್ದಾರೆ.

ಸಹಾಯಧನವೆಷ್ಟು?   21x21x3 ಅಳತೆಯ ಕೃಷಿ ಹೊಂಡ ನಿರ್ಮಾಣಕ್ಕೆ 1.13 ಲಕ್ಷ ರೂ.ವೆಚ್ಚವಾಗಲಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ಅಂದರೆ ರೂ.90,912 ಹಾಗೂ ಪರಿಶಿಷ್ಟ ವರ್ಗದವರಿಗೆ ಶೇ.90 ಅಂದರೆ ರೂ.1.02 ಲಕ್ಷ ಸಹಾಯಧನ ನೀಡಲಾಗುವುದು. ಇತರ ಗಾತ್ರದ ಕೃಷಿ ಹೊಂಡಗಳಿಗೂ ಅಳತೆಗೆ ಅನುಗುಣವಾಗಿ ಸಹಾಯಧನ ದೊರೆಯಲಿದೆ. ಕೃಷಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಲು ಸಾಮಾನ್ಯ ವರ್ಗದವರಿಗೆ ಶೇ.40 (7600 ದಿಂದ 14800 ರೂ.) ಮತ್ತು ಪರಿಶಿಷ್ಟ ವರ್ಗದವರಿಗೆ ಶೇ.50 (9500 ರಿಂದ 18500 ರೂ.) ರಷ್ಟು ಸಹಾಯಧನ ನೀಡಲಾಗುತ್ತದೆ.  ಇದಲ್ಲದೆ ಕೃಷಿ ಹೊಂಡಕ್ಕೆ ಅಳವಡಿಸುವ ಪಾಲಿಥಿನ್ (ಟಾರ್ಪಲ್)  ಅಳವಡಿಸಿಕೊಳ್ಳಲು ಸಾಮಾನ್ಯ ವರ್ಗದವರಿಗೆ ಶೇ.80 ಮತ್ತು ಪರಿಶಿಷ್ಟರಿಗೆ ಶೇ.90 ರಷ್ಟು ಸಹಾಯಧನ ದೊರೆಯಲಿದೆ ಎಂದು ಇಲಾಖೆ ತಿಳಿಸಿದೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

8 minutes ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 days ago