ಸಾಮಾಜಿಕ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದ:ಅರುಣ್ ಕುಮಾರ್ ಬೋರುಗುಡ್ಡೆ ತನ್ನ ಸರ್ವಸ್ವವನ್ನು ಸಮಾಜ ಸೇವೆಗಾಗಿ ಅರ್ಪಿಸಿದ ಅಪರೂಪದ ವ್ಯಕ್ತಿ ಎಂದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ನರಿಕೊಂಬು ಗ್ರಾ.ಪಂ.ಸದಸ್ಯ ಮತ್ತು ಸಾಮಾಜಿಕ ಕಾರ್ಯಕರ್ತ ಹಾಗೂ ಸಮಾಜ ಸೇವಾ ಸಹಕಾರಿ ಸಂಘದ ನಿರ್ದೇಶಕ ಅರುಣ್ ಕುಲಾಲ್ ಬೋರುಗುಡ್ಡೆ ಹಾಗೂ ಅವರ ಮಗ ಧ್ಯಾನ್ ಅವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿದರು ಈ ಸಂದರ್ಭ ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೋಟ್ಯಾಡಿ, ಪ್ರಮುಖರಾದ ಚೆನ್ನಪ್ಪ ಕೋಟ್ಯಾನ್, ಹರಿಕೃಷ್ಣ ಬಂಟ್ವಾಳ, ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಯಶೋಧರ ಕರ್ಬೆಟ್ಟು, ಜನಾರ್ದನ ಬೊಂಡಾಲ, ಸುರೇಶ್ ಕುಲಾಲ್, ಜಗನಾಥ ಬಂಗೇರ ನಿರ್ಮಲ್ ಬಂಧು ಮಿತ್ರರು ಹಿತೈಷಿಗಳು ಉಪಸ್ಥಿತರಿದ್ದರು. ಕಿರಣ್ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು