ಬಂಟ್ವಾಳ ತಾಲೂಕಿನಾದ್ಯಂತ ಶುಕ್ರವಾರ ರಾತ್ರಿಯಿಂದೀಚೆಗೆ ಗಾಳಿ ಮಳೆಯಾಗುತ್ತಿದ್ದು, ವ್ಯಾಪಕ ಹಾನಿ ಸಂಭವಿಸಿದೆ.
ಬಂಟ್ವಾಳ ತಾಲೂಕಿನ ಅನಂತಾಡಿ ಎಂಬಲ್ಲಿ ಆಟೊದ ಮೇಲೆ ಮರ ಮಗುಚಿದ ಘಟನೆ ನಡೆದಿದೆ. ಅನಂತಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಚಲಿಸುತ್ತಿದ್ದ ಆಟೊದ ಮೇಲೆ ಮರ ಉರುಳಿಬಿದ್ದು, ಆಟೊ ಜಖಂಗೊಂಡಿದ್ದು, ಚಾಲಕ ಗಾಯಗೊಂಡಿದ್ದಾರೆ.