ಪ್ರಮುಖ ಸುದ್ದಿಗಳು

ಅತಿವೃಷ್ಟಿ: ದಕ್ಷಿಣ ಕನ್ನಡ ಜಿಲ್ಲೆಗೆ ಎನ್.ಡಿ.ಆರ್.ಎಫ್/ಎಸ್.ಡಿ.ಆರ್.ಎಫ್. ತಂಡ – ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಆಗಮಿಸಲಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ತಿಳಿಸಿದ್ದಾರೆ.

ಜಾಹೀರಾತು

ಭಾನುವಾರ ಜಿಲ್ಲೆಯ ಮಳೆ ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಆನ್ ಲೈನ್ ಸಭೆ ನಡೆಸಿ ಮಾತನಾಡಿದರು.

ರಾಷ್ಟ್ರೀಯ ವಿಪತ್ತು ದಳ(ಎನ್.ಡಿ.ಆರ್.ಎಫ್.)  ದ ಒಂದು ತಂಡವು ಆಗಮಿಸಲಿದ್ದು, ಇದನ್ನು ಪುತ್ತೂರಿನಲ್ಲಿ ಇಡಲಾಗುವುದು. ರಾಜ್ಯ ವಿಪತ್ತು ದಳ(ಎಸ್.ಡಿ.ಆರ್.ಎಫ್) ಎರಡು ತಂಡವು ಆಗಮಿಸಲಿದ್ದು, ಮಂಗಳೂರು ಹಾಗೂ ಸುಬ್ರಹ್ಮಣ್ಯ ದಲ್ಲಿ ಇಡಲಾಗುವುದು. ಈ ದಳಗಳು‌ ಎಲ್ಲ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿದ್ದು, ಪ್ರಾಕೃತಿಕ ವಿಪತ್ತುಗಳ‌ ಸಂದರ್ಭದಲ್ಲಿ ಕಾರ್ಯಾಚರಿಸಲಿದೆ. ಎಸ್.ಡಿ.ಆರ್.ಎಫ್. ತಂಡ ಈಗಾಗಲೆ ಆಗಮಿಸಿದೆ ಎಂದು ಅವರು ಹೇಳಿದರು.

ವಿಪತ್ತು ನಿರ್ವಹಣೆಗೆ ‌‌ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಗ್ರಾ.ಪಂ. ಪಿಡಿಓ ಗಳು ತಮ್ಮ‌ ವ್ಯಾಪ್ತಿಯಲ್ಲಿ ಕಟ್ಟೆಚ್ಚರದಿಂದ ಇರಬೇಕು. ಯಾವುದೇ ಪ್ರಾಕೃತಿಕ ದುರಂತಗಳು ಸಂಭವಿಸಿದರೆ ತಕ್ಷಣವೇ ಸ್ಪಂದಿಸಬೇಕು. ಜೀವ ಹಾನಿ ತಪ್ಪಿಸಲು ಆದ್ಯತೆ ನೀಡಬೇಕು. ತಾಲೂಕು ಆಡಳಿತದೊಂದಿಗೆ ಸಮನ್ವಯದಿಂದ ಕಾರ್ಯಾಚರಿಸಿ, ದುರಂತದ ತೀವ್ರತೆ ತಗ್ಗಿಸಬೇಕು. ಮೆಸ್ಕಾಂ, ಅರಣ್ಯ  ಸೇರಿದಂತೆ ಸಂಬಂಧಿಸಿದ ಯಾವುದೇ ಇಲಾಖೆಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

 5 ದಿನ ರೆಡ್ ಅಲರ್ಟ್: 

ಹವಾಮಾನ ಇಲಾಖೆಯು 5 ದಿನ ರೆಡ್ ಅಲಟ್೯ ಘೋಷಿಸಿದೆ. ಈ‌ ಹಿಂದೆ ದುರ್ಘಟನೆ ಆಗಿರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಬೇಕು. ಜೆಸಿಬಿ, ಬೋಟುಗಳನ್ನು ಸಿದ್ಧವಾಗಿಡಬೇಕು. ಶಾಲೆಗಳು ಶುರು ಆಗುವ ಮೊದಲು ಶಿಥಿಲಗೊಂಡಿರುವ ಅಂಗನವಾಡಿ ಮತ್ತು ಶಾಲಾ ಕೊಠಡಿಗಳನ್ನು ತೆರವುಗೊಳಿಸಲು ಡಾ. ಕೆ. ಆನಂದ್ ಸೂಚಿಸಿದರು.

 ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಂದ  ಕೆಲವು  ಜನವಸತಿ ಪ್ರದೇಶಗಳಲ್ಲಿ ತೀವ್ರ ತೊಂದರೆಯಾಗಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳಲು ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

 ಮಳೆಗಾಲ‌ ಶುರು ಆಗುವ ಮೊದಲೇ ಮೀನುಗಾರಿಕೆ ತೆರಳಿದ್ದ  ಬೋಟುಗಳು ಹವಾಮಾನ ವೈಪರೀತ್ಯಗಳಿಂದ ಹಿಂದಿರುಗಿ ಬರುತ್ತಿದ್ದು, ಈ ಬೋಟುಗಳಿಗೆ ಎನ್.ಎಂ.ಪಿ.ಎ. ಬಂದರಿಗೆ ಪ್ರವೇಶಿಸಲು ಅನುಮತಿ ನೀಡಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.  ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

19 hours ago