ದಕ್ಷಿಣ ಕನ್ನಡದಲ್ಲಿ ಮಹಾಮಳೆ – ಉಳ್ಳಾಲದಲ್ಲಿ ಪ್ರವಾಹ ಪರಿಸ್ಥಿತಿ, ಬೋಟ್ ಗಳಲ್ಲಿ ಸಾರ್ವಜನಿಕರ ಸ್ಥಳಾಂತರ… ಶಾಲೆಗಳಿಗೆ ರಜೆ.. ಇಬ್ಬರ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿವೆ. ಉಳ್ಳಾಲ ತಾಲೂಕಿನಾದ್ಯಂತ ನೂರಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ. ಪ್ರತ್ಯೇಕ ಸ್ಥಳಗಳಲ್ಲಿ ಎರಡು ಮನೆಗಳ ಮೇಲೆ ಗುಡ್ಡ ಕುಸಿದು, ಮಣ್ಣಿನಡಿ ಸಿಲುಕಿದ್ದ ಒಟ್ಟು ಆರು ಮಂದಿಯಲ್ಲಿ ಬಾಲಕಿ ಹಾಗೂ ಮಹಿಳೆ ಮೃತಪಟ್ಟಿದ್ದಾರೆ. ಉಳಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮೊಂಟೆಪದವು ಬಳಿ ಗುಡ್ಡ ಕುಸಿದು ಐವರು ಸಿಲುಕಿದ್ದರು. ಅವರ ಪೈಕಿ ಪ್ರೇಮಾ ಪೂಜಾರಿ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಳ್ಳಾಲ, ಕಲ್ಲಾಪು, ಬಗಂಬಿಲ, ಪಿಲಾರು, ಅಂಬಿಕಾ ರಸ್ತೆ, ಕೋಟೆಕಾರು, ತಲಪಾಡಿ, ಪಾವೂರು, ಹರೇಕಳ, ಉಳಿಯ ಪ್ರದೇಶಗಳಲ್ಲಿ ನೂರರಷ್ಟು ಮನೆಗಳು ಜಲಾವೃತಗೊಂಡಿವೆ. ದೇರಳಕಟ್ಟೆ ಕಾನಕೆರೆ ನಿವಾಸಿ ಫಾತಿಮ ನಯೀಮ ಮೃತಪಟ್ಟಿದ್ದಾರೆ. ದೇರಳಕಟ್ಟೆ ಕಾನಕೆರೆ ಬಳಿ ನೌಶದ್ ಎಂಬವರ ಮನೆಗೆ ತಡೆಗೋಡೆ ಕುಸಿದು ಫಾತಿಮಾ ನಯೀಮಾ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ  ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಇಂದು ದಿನಾಂಕ 30-5-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

 

Be the first to comment on "ದಕ್ಷಿಣ ಕನ್ನಡದಲ್ಲಿ ಮಹಾಮಳೆ – ಉಳ್ಳಾಲದಲ್ಲಿ ಪ್ರವಾಹ ಪರಿಸ್ಥಿತಿ, ಬೋಟ್ ಗಳಲ್ಲಿ ಸಾರ್ವಜನಿಕರ ಸ್ಥಳಾಂತರ… ಶಾಲೆಗಳಿಗೆ ರಜೆ.. ಇಬ್ಬರ ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*