ವಿಟ್ಲ: ಸಮೀಪದ ಮಂಗಳಪದವು ಎಂಬಲ್ಲಿ ನಿಂತಿದ್ದ ಮಣ್ಣು ಸಾಗಾಟದ ಲಾರಿ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ. ಒಕ್ಕೆತ್ತೂರು ಸಮೀಪದ ಇಸ್ಮಾಯಿಲ್ ಎಂಬವರ ಪುತ್ರ ಇರ್ಫಾನ್ ( 19)ಮೃತಪಟ್ಟವರು
ಒಕ್ಕೆತ್ತೂರು ಸಮೀಒದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಬೈಕ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದ್ದು, ಇರ್ಫಾನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಹಸವಾರ ಫಾರಿಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.
Be the first to comment on "ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು"