ಪ್ರಮುಖ ಸುದ್ದಿಗಳು

ಸುಳ್ಸುದ್ದಿ ಹರಡಿಸುವವರಿಗೆ ಎಸ್ಪಿ ಖಡಕ್ ವಾರ್ನಿಂಗ್

ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಹೇಳಿದ್ದಾರೆ. ಮಂಗಳೂರಿನ ಎಸ್ಪಿ ಕಚೇರಿಯಲ್ಲಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗೋಹತ್ಯೆ, ಸಾಗಾಟ, ಮಾದಕ ಪದಾರ್ಥಗಳ ಸಾಗಾಟ, ಮಾರಾಟ, ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.  ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ಮೊಬೈಲ್ ಸಂಖ್ಯೆ 9480805301 ಅಥವಾ ಕಛೇರಿಗೆ ಸಂಖ್ಯೆ 08242220503ಗೆ ಮಾಹಿತಿ ನೀಡಬಹುದು ಎಂದವರು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts