KALLADKA FLYOVER: ಫ್ಲೈಓವರ್ ಒಂದುಬದಿಯಿಂದ ಸಂಚಾರ ಆರಂಭವಾಗಿದೆ – ಚಾಲನೆ ಸಂದರ್ಭ ನಿಯಂತ್ರಣವಿರಲಿ…

ಬಂಟ್ವಾಳ: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರುಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ ರೋಡ್ಅಡ್ಡಹೊಳೆ  ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ನೀಡಿದ ಸೂಚನೆಯಂತೆ ಸೋಮವಾರ (ಜೂನ್ 2) ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಢಿತು. ಆದರೆ ಮೇಲ್ಸೇತುವೆಯಲ್ಲಿ ಹೋಗಬಹುದು ಎಂದು ಬೇಕಾಬಿಟ್ಟಿ ಹೋಗುವಂತಿಲ್ಲ. ಎದುರುಬದುರಾಗಿ ವಾಹನಗಳು ಸಂಚರಿಸುತ್ತಿರುವ ಕಾರಣ ಅಪಾಯಕ್ಕೆ ಆಹ್ವಾನ ನೀಡುವಂತಿದೆ.

KALLADKA FLYOVER

VIDEO: ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಡಿದೆ

ಮುಂಗಾರು ಚುರುಕುಗೊಂಡಿರುವ ಕಾರಣ ಮಂಗಳೂರುಬೆಂಗಳೂರು ಹೆದ್ದಾರಿಯಲ್ಲಿ ಬಿ.ಸಿ.ರೋಡ್‌-ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಆತಂಕ ಎದುರಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಹಿನ್ನಲೆಯಲ್ಲಿ ಎಲ್ಲೆಲ್ಲಿ ಕಾಮಗಾರಿಯಿಂದ ವಾಹನಗಳ ಸಂಚಾರಕ್ಕೆ ತೊಂದರೆ ಎದುರಾಗಿದೆಯೋ ಅಲ್ಲೆಲ್ಲ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಜನರ ಓಡಾಟಕ್ಕೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಕ್ಯಾ. ಚೌಟ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಮೇ. 29ರಿಂದ ಹೆದ್ದಾರಿ ಪ್ರಾಧಿಕಾರವು ಮಾಣಿ ಬಳಿಯ ವೆಹಿಕಲ್ ಅಂಡರ್ ಪಾಸ್(ವಿಯುಪಿಹಾಗೂ ಉಪ್ಪಿನಂಗಡಿ ಬಳಿಯ ವೆಹಿಕಲ್ ಅಂಡರ್ ಪಾಸ್  ದ್ವಿ ಪಥವನ್ನು ಸಂಚಾರಕ್ಕೆ ಮುಕ್ತಗೊಳಿಸಿದೆ. ಜೂ. 2ರಿಂದ ಕಲ್ಲಡ್ಕ ಪೇಟೆಯಲ್ಲಿರುವ ಮೇಲುರಸ್ತೆ(ಫ್ಲೈಓವರ್‌)ಯಲ್ಲಿ ಎಡಭಾಗವನ್ನು ವಾಹನಗಳ ಸಂಚಾರಕ್ಕೆ ತೆರವುಗೊಳಿಸಲಾಗಿದೆ.

VIDEO: Kalladka flyover open

ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ 64 ಕಿ.ಮೂಈ. ಉದ್ದದ ಹೆದ್ದಾರಿ ಕಾಮಗಾರಿ 2017ರಲ್ಲಿ ಎಲ್. ಆಂಡ್ ಟಿ ಕಂಪನಿಗೆ 821 ಕೋಟಿ ರೂಗಳಿಗೆ ವಹಿಸಲಾಗಿತ್ತು. ಹಲವು ಕಾರಣಕ್ಕೆ ವಿಳಂಬವಾಗಿ ಬಳಿಕ ಅರ್ಧದಲ್ಲೇ ಸ್ಥಗಿತಗೊಂಡಿತು. 2021ರಲ್ಲಿ 64 ಕಿ.ಮೀ. ಉದ್ದದ ಹೆದ್ದಾರಿಯನ್ನು 49 ಕಿ.ಮೀ ಹಾಗೂ 15 ಕಿ.ಮೀ. ಎಂದು ವಿಭಾಗಿಸಿ ಕೆಎನ್ ಆರ್ ಕನ್ಸ್ ಸ್ಟ್ರಕ್ಷನ್ಸ್ ಹೈದರಾಬಾದ್ ಹಾಗು ಎಂ. ಔತಡೆ ಪ್ರೈ. ಲಿ. ಮಹಾರಾಷ್ಟ್ರ ಕಂಪನಿಗಳಿಗೆ ಗುತ್ತಿಗೆ ನೀಡಲಾಯಿತು. ಅಲ್ಲಿಂದ ಕಾಮಗಾರಿಗೆ ವೇಗ ದೊರಕಿತು. ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ನೆಕ್ಕಿಲಾಡಿ, ಉಪ್ಪಿನಂಗಡಿ ಜಂಕ್ಷನ್, ಉಪ್ಪಿನಂಗಡಿ ಸುಬ್ರಹ್ಮಣ್ಯ ಕ್ರಾಸ್, ನೆಲ್ಯಾಡಿ, ಪೆರಿಯಶಾಂತಿಗಳಲ್ಲಿ ಓವರ್ ಪಾಸ್ ಮೇಲ್ಸೇತುವೆ ಹಾಗೂ ಕಲ್ಲಡ್ಕದಲ್ಲಿ 2.1 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಕಾಮಗಾರಿ ಏಕಕಾಲದಲ್ಲಿ ಆರಂಭಗೊಂಡಿತು.ಕಲ್ಲಡ್ಕದ ಪೂರ್ಲಿಪ್ಪಾಡಿಯಿಂದ ಕೃಷಱಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದರ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ ಗಳ ಫ್ಲೈಓವರ್ ಇದಾಗಿದೆ.ಜೂನ್ ಕೊನೆಯೊಳಗೆ ಫ್ಲೈಓವರ್ ಗೆ ಸಂಬಂಧಪಟ್ಟ ಎಲ್ಲ ಕಾಮಗಾರಿ ಮುಕ್ತಾಯಗೊಳ್ಳುವ ನಿರೀಕ್ಷೆ ಇದೆ,.

About the Author

Harish Mambady
ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ. Harish Mambady - who has experience working as a Journalist in various Print and Digital Media in Dakshina Kannada, Udupi (Mangalore, Manipal, and Bantwal) for the past 26 years, He Started digital Media www.bantwalnews.com in 2016.

Be the first to comment on "KALLADKA FLYOVER: ಫ್ಲೈಓವರ್ ಒಂದುಬದಿಯಿಂದ ಸಂಚಾರ ಆರಂಭವಾಗಿದೆ – ಚಾಲನೆ ಸಂದರ್ಭ ನಿಯಂತ್ರಣವಿರಲಿ…"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*