ಶಿಕ್ಷಣದ ಮೂಲಕ ಮಾತ್ರ ಸ್ವಾಭಿಮಾನದ ಬದುಕು ಬದುಕಲು ಸಾಧ್ಯ ಇಂದಿನ ವೈಜ್ಞಾನಿಕ ಯುಗದಲ್ಲಿ ಶೈಕ್ಷಣಿಕವಾಗಿ ಬೆಳೆದ ಮಗು ಯಾವುದೇ ಕ್ಷೇತ್ರದಲ್ಲೂ ಹಿಂದುಳಿಯಲಾರ ಬದುಕಿನ ಏಳುಬೀಳುಗಳಿಗೆ ಶಿಕ್ಷಣವು ಮನೋಬಲ ತುಂಬುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು.
ಸೋಮವಾರ ವೀರಕಂಭ ಮಜಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ತಾಲೂಕು ಮಟ್ಟದ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯಾಧಿಕಾರಿ ವಿದ್ಯಾ ಮಾತನಾಡಿ ಉತ್ತಮ ಜೀವನ ಶೈಲಿಯ ಜೊತೆಗೆ ನಿರಂತರ ಅಭ್ಯಾಸವು ಗುರಿಮಟ್ಟುವಲ್ಲಿ ಸಹಾಯ ಮಾಡುತ್ತದೆ ಎಂದರು.
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಸಮುದಾಯದ ಸಹಕಾರದಿಂದ ಶಾಲೆಗಳು ಉತ್ತಮ ಅಭಿವೃದ್ಧಿಯನ್ನು ಕಾಣುತ್ತಿವೆ ಪೋಷಕರು ಮಗುವಿಗಾಗಿ ಆಸ್ತಿ ಮಾಡುವ ಬದಲು ಮಗುವನ್ನೇ ಆಸ್ತಿ ಯನ್ನಾಗಿ ಮಾಡಿ ಎಂದರು.
ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಹಾಗೂ ವಿಟ್ಲ ಗ್ರಾಮೀಣ ಬ್ಯಾಂಕಿನ ನಿರ್ದೇಶಕ ವಿಶ್ವನಾಥ.ಎಂ,. ಮಜಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್ ರಾಕೋಡಿ ಶುಭ ಹಾರೈಸಿದರು.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಕ್ಲಸ್ಟರ್ ಶಿಕ್ಷಣ ಸಂಯೋಜಕಿ ಪ್ರತಿಮಾ ವೈ.ವಿ.ಸರಕಾರದಿಂದ ಸಿಗುವ ಸೌಲಭ್ಯಗಳು ಶಿಕ್ಷಣದಲ್ಲಿ ಮಗುವಿಗೆ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳನ್ನು ಘೋಷವಾದ್ಯದ ಮೂಲಕ ಮೆರವಣಿಗೆಯಲ್ಲಿ ಕರೆತರಲಾಯಿತು, ಗುಬ್ಬಚ್ಚಿ ಗೂಡು ಕಾರ್ಯಕ್ರಮದ ರೂವಾರಿಗಳಾದ ರಮ್ಯಾ ಹಾಗೂ ನಿತ್ಯಾನಂದ ಶೆಟ್ಟಿ ದಂಪತಿ ವಿದ್ಯಾರ್ಥಿಗಳಿಗೆ ಕಾರ್ಟೂನ್ ನೆಟ್ವರ್ಕ್ ಗೊಂಬೆ ಮುಖವಾಡದೊಂದಿಗೆ ಮಕ್ಕಳನ್ನು ಆಕರ್ಷಿಸಿದರು.
ಪ್ರಧಾನಮಂತ್ರಿ ಅಭಿಯಾನ ನಿರ್ಮಾಣ ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಅಕ್ಷಯ ಬುಟ್ಟಿ ಎನ್ನುವ ವಿನೂತನ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಉತ್ತಮ ಹಾಗೂ ಆರೋಗ್ಯಕರ ಕುಡಿಯುವ ನೀರಿನ ವ್ಯವಸ್ಥೆಗಾಗಿ ಯುವ ಸೇವಾಪಥ ಕಡೇಶಿವಾಲಯ ವತಿಯಿಂದ ನೀಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ಇಲಾಖೆಯಿಂದ ನೀಡುತ್ತಿರುವ ಎಲ್ಲಾ ಉಚಿತ ಯೋಜನೆಗಳಿಗೆ ಚಾಲನೆ ನೀಡಿ ಸದರಿ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸಲಾಯಿತು.
ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ನಾರುಕೋಡಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ವನಿತಾ, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ವಿಶೇಷ ಸಂಪನ್ಮೂಲ ವ್ಯಕ್ತಿ ರವೀಂದ್ರ, ಮಾತೃಶ್ರೀ ಗೆಳೆಯರ ಬಳಗದ ಅಧ್ಯಕ್ಷರಾದ ರಮೇಶ್ ಗೌಡ ಮೈರ, ಕಲ್ಲಡ್ಕ ಮತ್ತು ಕಂಬಳಬೆಟ್ಟು ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ, ಮೆಲ್ಕಾರ್ ಚಂದ್ರಿಕಾ ವೆಜಿಟೇಬಲ್ಸ್ ಮಾಲಕ ಮೊಹಮದ್ ಶರೀಫ್, ಉಪಸ್ಥಿತರಿದ್ದರು.ಶಿಕ್ಷಣ ಸಂಯೋಜಕಿ ಪ್ರತಿಮಾ ಸ್ವಾಗತಿಸಿದರು. ಮಜಿಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ವಂದಿಸಿದರು. ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು
Be the first to comment on "ಮಜಿ ವೀರಕಂಭದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ"