ನಂತೂರು ಶ್ರೀ ಭಾರತೀ ಪದವಿಪೂರ್ವಕಾಲೇಜಿನಲ್ಲಿ ಪ್ರಾರಂಭೋತ್ಸವ

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸಮಿತಿ ಕಾರ್ಯದರ್ಶಿ ಸೌಮ್ಯ ಶೆಟ್ಟಿ ಅವರು ಉದ್ಘಾಟಿಸಿ, ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಅನೇಕ ಗುಪ್ತ ಕೌಶಲ್ಯಗಳಿರುತ್ತದೆ.  ಇದನ್ನು ಅರಿತು ಮಕ್ಕಳ ಸರ್ವತೋಮುಖ ಬೆಳವಣಿಗೆಯ ಕಡೆ ಶಾಲೆಯು ಗಮನ ಹರಿಸಬೇಕೆಂದು ತಿಳಿಸಿದರು.

ಶ್ರೀ ಭಾರತೀ ಸಮೂಹ ಸಂಸ್ಥೆ ಸೇವಾ ಸಮಿತಿ ಅಧ್ಯಕ್ಷ ಗಣೇಶ ಮೋಹನ್ ಕಾಶಿಮಠ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಹಾಗೂ ಉದ್ಧೇಶಗಳನ್ನು ಇಟ್ಟುಕೊಳ್ಳಬೇಕು ಎಂದರು. ಸಂಸ್ಥೆಯ ಸೇವಾ ಸಮಿತಿಯ ಕಾರ್ಯಾಲಯ ಕಾರ್ಯದರ್ಶಿ ಎಂ.ಟಿ. ಭಟ್  ಉಪಸ್ಥಿತರಿದ್ದರು. ಇದೇ ಸಂದರ್ಭ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಶ್ರೀ ಭಾರತೀ ಸಮೂಹ ಸಂಸ್ಥೆಯ ನಿರ್ದೇಶಕ ಗಿರೀಶ್ ಎಂ. ಪ್ರಸ್ತಾವಿಸಿದರು. ಪ್ರಿನ್ಸಿಪಾಲ್ ಸಂದೀಪ್ ಆಚಾರ್ಯ ಕಾಲೇಜಿನ ನೀತಿ–ನಿಯಮಗಳ ಕುರಿತಾದ ಮಾಹಿತಿ ನೀಡಿದರು. ವಿದ್ಯಾರ್ಥಿನಿ ಜಾನ್ವಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರೇಶ್ ನಾಯಕ್  ಸ್ವಾಗತಿಸಿದರು. ಶ್ರೀಶಾಂತ್ ವಂದಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಂತೂರು ಶ್ರೀ ಭಾರತೀ ಪದವಿಪೂರ್ವಕಾಲೇಜಿನಲ್ಲಿ ಪ್ರಾರಂಭೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*