ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸಮಿತಿ ಕಾರ್ಯದರ್ಶಿ ಸೌಮ್ಯ ಶೆಟ್ಟಿ ಅವರು ಉದ್ಘಾಟಿಸಿ, ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಅನೇಕ ಗುಪ್ತ ಕೌಶಲ್ಯಗಳಿರುತ್ತದೆ. ಇದನ್ನು ಅರಿತು ಮಕ್ಕಳ ಸರ್ವತೋಮುಖ ಬೆಳವಣಿಗೆಯ ಕಡೆ ಶಾಲೆಯು ಗಮನ ಹರಿಸಬೇಕೆಂದು ತಿಳಿಸಿದರು.
ಶ್ರೀ ಭಾರತೀ ಸಮೂಹ ಸಂಸ್ಥೆ ಸೇವಾ ಸಮಿತಿ ಅಧ್ಯಕ್ಷ ಗಣೇಶ ಮೋಹನ್ ಕಾಶಿಮಠ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಹಾಗೂ ಉದ್ಧೇಶಗಳನ್ನು ಇಟ್ಟುಕೊಳ್ಳಬೇಕು ಎಂದರು. ಸಂಸ್ಥೆಯ ಸೇವಾ ಸಮಿತಿಯ ಕಾರ್ಯಾಲಯ ಕಾರ್ಯದರ್ಶಿ ಎಂ.ಟಿ. ಭಟ್ ಉಪಸ್ಥಿತರಿದ್ದರು. ಇದೇ ಸಂದರ್ಭ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಶ್ರೀ ಭಾರತೀ ಸಮೂಹ ಸಂಸ್ಥೆಯ ನಿರ್ದೇಶಕ ಗಿರೀಶ್ ಎಂ. ಪ್ರಸ್ತಾವಿಸಿದರು. ಪ್ರಿನ್ಸಿಪಾಲ್ ಸಂದೀಪ್ ಆಚಾರ್ಯ ಕಾಲೇಜಿನ ನೀತಿ–ನಿಯಮಗಳ ಕುರಿತಾದ ಮಾಹಿತಿ ನೀಡಿದರು. ವಿದ್ಯಾರ್ಥಿನಿ ಜಾನ್ವಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರೇಶ್ ನಾಯಕ್ ಸ್ವಾಗತಿಸಿದರು. ಶ್ರೀಶಾಂತ್ ವಂದಿಸಿದರು.