ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತದ ನೂತನ ಕಟ್ಟಡ ಅಕ್ಷಯ ಸೌಧ ಬಿ.ಸಿ.ರೋಡ್ ಕೈಕಂಬದ ಪೊಳಲಿ ದ್ವಾರದ ಬಳಿ ಉದ್ಘಾಟನೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ.ಕರುಣೇಂದ್ರ ಪೂಜಾರಿ ತಿಳಿಸಿದರು.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜೂನ್ 8ರಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭಗೊಳ್ಳುತ್ತದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ನೂತನ ಕಟ್ಟಡ ಉದ್ಘಾಟಿಸುತ್ತಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ದೀಪ ಪ್ರಜ್ವಲನ ಮಾಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಬಂಟ್ವಾಳ ವ್ಯ.ಸೇ.ಸಹಕಾರಿ ಸಂಘದ ಅಧ್ಯಕ್ಷ ಎಂ.ಕರುಣೇಂದ್ರ ಪೂಜಾರಿ ಕೊಂಬರಬೈಲು ವಹಿಸಲಿದ್ದಾರೆ. ಜಿ.ಆನಂದ್ ಸಭಾಂಗಣವನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸುವರು. ಗಣಕೀಕರಣವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸುವರು. ಸೇಫ್ ಲಾಕರ್ ಅನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಸಭಾಭವನವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಪ್ರತಾಪ್ ಸಿಂಹ ನಾಯಕ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್, ಪುರಸಭೆ ಬಂಟ್ವಾಳ ಅಧ್ಯಕ್ಷ ಬಿ.ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಸ್ಕಾಡ್ಸ್ ಅಧ್ಯಕ್ಷ ರವಿಂದ್ರ ಕಂಬಳಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿಸೋಜ, ದ.ಕ. ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಸಹಾಯಕ ನಿಬಂಧಕ ಸುಧೀರ್ ಕುಮಾರ್, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಜಯಂತಿ ವಿ.ಬಂಗೇರ ಉಪಸ್ಥಿತರಿರುವರು ಎಂದು ಅವರು ಮಾಹಿತಿ ನೀಡಿದರು. 1976ರಲ್ಲಿ ಸಂಘ ರಚನೆಗೊಂಡಿದ್ದು, ಪ್ರಗತಿಯತ್ತ ಸಾಗಿದ್ದು, ಪ್ರಧಾನ ಕಚೇರಿಯ ಆಡಳಿತ ವಿಭಾಗವನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಆದಿರಾಜ ಜೈನ್, ನಿರ್ದೇಶಕರಾದ ಬಿ.ಸದಾಶಿವ ಶೆಣೈ, ದಿವಾಕರ ಶೆಟ್ಟಿ ಕುಪ್ಪಿಲ, ಗಣೇಶ್ ದಾಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.